More

    ಏಳನೇ ನಾವಿಕ ವಿಶ್ವ ಕನ್ನಡ ಸಮಾವೇಶ; ಈ ಸಲ ಎಲ್ಲಿ, ಯಾವಾಗ?

    | ಬೆಂಕಿ ಬಸಣ್ಣ , ನ್ಯೂ ಯಾರ್ಕ್

    “7ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2023” ಅಮೇರಿಕ ದೇಶದ ಟೆಕ್ಸಾಸ್ ರಾಜ್ಯದ ರಾಜಧಾನಿ ಆಸ್ಟಿನ್ ನಗರದಲ್ಲಿ ಬರುವ ಸೆಪ್ಟೆಂಬರ್ 1 ರಿಂದ 3 ರವರೆಗೆ ನಡೆಯಲಿದೆ ಎಂದು ನಾವಿಕ ಸಂಸ್ಥೆಯ ಅಧ್ಯಕ್ಷರಾದ ಮಂಜುನಾಥ್ ರಾವ್ ಪ್ರಕಟಿಸಿದ್ದಾರೆ. ಈ ಬೃಹತ್ ಸಮಾವೇಶವನ್ನು ನಾವಿಕ ಸಂಸ್ಥೆಯು “ಆಸ್ಟಿನ್ ಕನ್ನಡ ಸಂಘದ” ಸಹಯೋಗದೊಂದಿಗೆ ಆಯೋಜಿಸುತ್ತಿದೆ.

    ಈ ಸಮಾವೇಶದಲ್ಲಿ ಬಿಸಿನೆಸ್ ಫೋರಮ್, ವುಮೆನ್ಸ್ ಫೋರಮ್, ಕವಿ ಗೋಷ್ಠಿ, ಯೂಥ್ ಫೋರಮ್, ಸಾಹಿತ್ಯ ಗೋಷ್ಠಿ ಹೀಗೆ ಅನೇಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಸತತವಾಗಿ ನಡೆಯಲಿವೆ. ಈ ಸಮಾವೇಶದಲ್ಲಿ ಅನಿವಾಸಿಯರು ಮಾತ್ರವಲ್ಲದೇ ಕರ್ನಾಟಕದ ಖ್ಯಾತನಾಮ ಕಲಾವಿದರಿಂದ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

    ಆಸ್ಟಿನ್ ಕನ್ನಡ ಸಂಘದ ಅಧ್ಯಕ್ಷ ಸದಾಶಿವ ಕಲ್ಲೂರ್ ಅವರು ಮಾತನಾಡಿ, “ಇಂತಹ ಬೃಹತ್ ವಿಶ್ವ ಕನ್ನಡ ಸಮ್ಮೇಳನದ ಆಯೋಜನೆಯಲ್ಲಿ ಸಹಭಾಗಿತ್ವ ವಹಿಸುವುದು ನಮಗೆ ಒದಗಿ ಬಂದ ಸುವರ್ಣಾವಕಾಶವಾಗಿದ್ದು, ಈ ಸಮಾವೇಶವನ್ನು ಆಯೋಜಿಸಲು ಆಸ್ಟಿನ್ ನಗರದ ಕನ್ನಡಿಗರು ಅತಿ ಉತ್ಸಾಹದಿಂದ ಎದುರು ನೋಡುತ್ತಿದ್ದಾರೆ. ಜೊತೆಗೆ ನಮ್ಮ ಪಕ್ಕದ ಡಲ್ಲಾಸ್ ಮತ್ತು ಹೂಸ್ಟನ್ ನಗರಗಳ ಕನ್ನಡಿಗರು ಸಹ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

    ನಾವಿಕ ಸಂಸ್ಥೆಯು ಮಾತೃಭೂಮಿ ಕರ್ನಾಟಕ ಜನತೆಗೆ, ವಿದ್ಯಾರ್ಥಿಗಳಿಗೆ ಕೋವಿಡ್ ಸಮಯದಲ್ಲಿ, ಪ್ರವಾಹ ವಿಕೋಪ , ನೈಸರ್ಗಿಕ ವಿಕೋಪ ಮುಂತಾದ ಸಂದರ್ಭಗಳಲ್ಲಿ ಸಹಾಯ ಮಾಡುತ್ತಲೇ ಬಂದಿದೆ. ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆಯ ಹಿರಿಮೆಯನ್ನು ತಮ್ಮ ಮುಂದಿನ ಪೀಳಿಗೆಗೂ ಮುಂದುವರಿಸಿಕೊಂಡು ಹೋಗುವ ಅನೇಕ ಪ್ರಯತ್ನಗಳಲ್ಲಿ ಒಂದು ಭಾಗವಾಗಿ ನಾವಿಕ ಸಂಸ್ಥೆಯು ವಿಶ್ವ ಕನ್ನಡ ಸಮ್ಮೇಳನಗಳನ್ನು ಸಂಯೋಜಿಸುತ್ತಾ ಬಂದಿದೆ.

    ನಾವಿಕ ಸಂಸ್ಥೆಯು ಬೆಸ ವರ್ಷಗಳಲ್ಲಿ ಅಮೇರಿಕಾ ದೇಶದಲ್ಲಿ ಮತ್ತು ಸಮ ವರ್ಷಗಳಲ್ಲಿ ಅಮೇರಿಕಾದ ಹೊರಗಡೆ ವಿಶ್ವ ಕನ್ನಡ ಸಮ್ಮೇಳನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ವರ್ಷ ಆಫ್ರಿಕಾ ಖಂಡದ ಕೀನ್ಯಾ ದೇಶದಲ್ಲಿ ನಾವಿಕ ಸಂಸ್ಥೆಯು ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನವನ್ನು ಭಾರಿ ಅದ್ಧೂರಿಯಾಗಿ ಆಯೋಜಿಸಿದ್ದನ್ನು ನೆನಪಿಸಿಕೊಳ್ಳಬಹುದು.

    ಏಳನೇ ನಾವಿಕ ವಿಶ್ವ ಕನ್ನಡ ಸಮಾವೇಶ; ಈ ಸಲ ಎಲ್ಲಿ, ಯಾವಾಗ?

    ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ

    ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts