More

    ನವೋದಯ ಶಾಲೆಗಳು ಪ್ರತಿಭೆ ಗುರುತಿಸಲು ಅತ್ಯುತ್ತಮ ವೇದಿಕೆ

    ಶಿವಮೊಗ್ಗ: ನವೋದಯ ಶಾಲೆಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಅತ್ಯುತ್ತಮ ವೇದಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

    ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಹಳೆ ವಿದ್ಯಾರ್ಥಿಗಳ ಮಿಲನ ಮತ್ತು 13ನೇ ಬ್ಯಾಚ್‌ನಿಂದ ಬೆಳ್ಳಿಹಬ್ಬ ಸಂಭ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ರೀತಿಯ ಕಾರ್ಯಕ್ರಮಗಳು ನವೋದಯ ಶಾಲೆಯ 12ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ಸ್ಪೂರ್ತಿ. ಇದರಿಂದ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರ ಆರಿಸಿಕೊಂಡರೆ ತಮಗೆ ಉತ್ತಮ ಭವಿಷ್ಯ ಇದೆ ಎಂಬ ಕಲ್ಪನೆ ಮಕ್ಕಳಿಗೆ ಬರಲಿದೆ ಎಂದರು.
    ಕುವೆಂಪು ವಿವಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಮಾತನಾಡಿ, ಮಾನವ ಮತ್ತು ಪರಿಸರ ಒಂದು ಅವಿನಾಭವ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಪೋಷಿಸಿ ಬೆಳಸುವ ಗುಣ ಮಕ್ಕಳಲ್ಲಿ ಬೆಳೆಯಬೇಕು. ಗಾಜನೂರಿನ ನವೋದಯ ಶಾಲೆ ಪ್ರಕೃತಿ ಮಡಿಲಲ್ಲಿ ಇದ್ದು, ಇಲ್ಲಿನ ಮಕ್ಕಳು ಗಿಡಗಳನ್ನು ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟು, ಮುಂದಿನ ಪೀಳಿಗೆಗೆ ಮಾದರಿ ಆಗಲಿ ಎಂದರು.
    13ನೇ ಬ್ಯಾಚ್ ವಿದ್ಯಾರ್ಥಿಗಳು 1.10 ಲಕ್ಷ ರೂ. ವ್ಯಯಿಸಿ ಎರಡು ಶಾಲಾ ಕೊಠಡಿಗಳಿಗೆ ಚಾವಣಿಯ ಸೀಲಿಂಗ್ ನಿರ್ಮಾಣಕ್ಕೆ ಸಹಕರಿಸಿದರು. ಜತೆಗೆ ಬೆಂಗಳೂರಿನ ಖ್ಯಾತ ಪಾದಗಳ ಆರೈಕೆಯ ಸಂಸ್ಥೆಯಿಂದ ಉಚಿತವಾಗಿ ಪಾದಗಳ ತಪಾಸಣೆ, ಅದರ ನಿರ್ವಹಣೆ ಮತ್ತು ಸಮಗ್ರ ಆರೈಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಗಾಜನೂರು ನವೋದಯದಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.
    ನಿವೃತ್ತ ಪ್ರಾಚಾರ್ಯ ರವಿ, ಉಪ ಪ್ರಾಚಾರ್ಯ ಜಾನ್ಸನ್ ಪಿ ಜೇಮ್ಸ್, ಶಿಕ್ಷಕ ವಿ.ಎಸ್.ಹೆಗಡೆ, ಮನೋಜ್ ಪವಾಸ್ಕರ್, ರಾಜಕುಮಾರ್ ಕಡೆಮನಿ, ಸುರೇಶ್, ಹಳೆ ವಿದ್ಯಾರ್ಥಿ ಸಂಘ ಮಿಲನದ ಅಧ್ಯಕ್ಷ ತಾರಾನಾಥ್, ಅರುಣ್ ಕುಮಾರ್, ಡಾ. ಸುನಿಲ್ ಕುಮಾರ್, ಎಂ.ಪಿ.ನವೀನ್‌ಕುಮಾರ್, ಪ್ರಕಾಶ್ ಜೋಯ್ಸ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts