

ಕಡಬ: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ನವರಾತ್ರಿ ಪೂಜಾ ಮಹೋತ್ಸವ ಅ.3ರಿಂದ ಅ 11ರ ವರೆಗೆ ನಡೆಯಿತು. 3ರಂದು ತೋರಣ ಮುಹೂರ್ತ ನಡೆದು, ಪ್ರತಿದಿನ ವಿಶೇಷ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. 10ರಂದು ಭದ್ರಕಾಳಿ ಹೋಮ, 11ರಂದು ಆಯುಧ ಪೂಜೆ, ದೇವಿಗೆ ವಿಶೇಷ ಪೂಜೆ ನಡೆಯಿತು. ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು. ದೇವಸ್ಥಾನದ ಆನುವಂಶಿಕ ಮೊಕ್ತೇಸರ, ಕ್ಷೇತ್ರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.