More

    ನವಟೂರು ಸೇತುವೆ ಕಾಮಗಾರಿ ಪೂರ್ಣ

    ಆನಂದಪುರ: ಸಮೀಪದ ಅಂದಾಸುರ ಗ್ರಾಮದಲ್ಲಿನ ನವಟೂರು ಹೊಳೆಗೆ ನೂತನ ಸೇತುವೆ ನಿರ್ಮಿಸುವ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದೆ. ಕಳೆದ ಫೆಬ್ರವರಿಯಲ್ಲಿ ಸೇತುವೆ ಕಾಮಗಾರಿ ಆರಂಭವಾಗಿತ್ತು. ಹಳೆಯ ಸೇತುವೆಯನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಸಂಚಾರಕ್ಕೆ ಅನುಕೂಲವಾಗಲು ಹೊಳೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ನೀರು ಹರಿವಿಗೆ ಸಿಮೆಂಟ್ ಪೈಪ್ ಅಳವಡಿಸಲಾಗಿತ್ತು. ಈಗ ಮಳೆ ಜೋರಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಹೊಳೆಗೆ ಹರಿವು ಆರಂಭವಾಗಿದೆ. ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆಯ ಪೈಪ್‌ಗಳಲ್ಲಿ ಮಣ್ಣು ತುಂಬಿಕೊAಡು ನೀರಿನ ಹರಿವಿಗೆ ಅಡಚಣೆಯಾಗಿತ್ತು. ರಸ್ತೆಯ ಮಣ್ಣು ಹೊರ ಹಾಕಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಸೇತುವೆ ಗುತ್ತಿಗೆದಾರರು ಜೆಸಿಬಿ ಮೂಲಕ ಶನಿವಾರ ಮತ್ತು ಭಾನುವಾರ ಹರ ಸಾಹಸಪಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts