More

    ನಾಲ್ಕು ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್

    ನವದೆಹಲಿ: ಮೂರು ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್​ ಶರೀಫ್​ ನಾಲ್ಕು ವರ್ಷಗಳ ಬಳಿಕ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲಿ ಅವರ ಆಗಮನವು ಅಲ್ಲಿನ ರಾಜಕೀಯದಲ್ಲಿ ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ.

    ವಿಶೇಷ ವಿಮಾನದ ಮೂಲಕ ಇಸ್ಲಮಾಬಾದ್​ಗೆ ಆಗಮಿಸಿದ ನವಾಜ್​ ಷರೀಫ್​ಗೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಪಕ್ಷದ ನಾಯಕರು ಹಾಗೂ ಮುಖಂಡರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತವನ್ನು ನೀಡಿದ್ದಾರೆ.

    ಇದನ್ನೂ ಓದಿ: ತೆಲಂಗಾಣವನ್ನು ಹಾಳು ಮಾಡುವಲ್ಲಿ ನಿಮ್ಮ ಕುಟುಂಬ ಮಹತ್ವದ ಪಾತ್ರ ವಹಿಸಿದೆ; ರಾಹುಲ್ ಹೇಳಿಕೆಗೆ ಕೆಸಿಆರ್ ಪುತ್ರಿ ತಿರುಗೇಟು

    2024ರ ಜನವರಿ ತಿಂಗಳಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನವಾಜ್​ ಷರೀಫ್​ ನಾಲ್ಕು ವರ್ಷಗಳ ಅಜ್ಞಾತವಾಸದ ಬಳಿಕ ದೇಶಕ್ಕೆ ಮರಳುತ್ತಿದ್ದಾರೆ ಎಂದು ಹೇಳಲಾಗಿದೆ. ದೇಶದಿಂದ ಗಡಿಪಾರಾದ ನಂತರ ನವಾಜ್ ಷರೀಫ್ ಲಂಡನ್‌ನಲ್ಲಿ ನಾಲ್ಕು ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಮರಳುತ್ತಿದ್ದಾರೆ.

    ತಾಯ್ನಾಡಿಗೆ ವಾಪಸ್ಸಾದ ಕುರಿತು ಮಾತನಾಡಿರುವ ನವಾಜ್ ಷರೀಫ್, ಪ್ರಸ್ತುತ ಪಾಕಿಸ್ತಾನ ಎದುರಿಸುತ್ತಿರುವ ಹಣಕಾಸು ಬಿಕ್ಕಟ್ಟನ್ನು ಎದುರಿಸಲು ನಮ್ಮ ಪಕ್ಷ ಸಮರ್ಥವಾಗಿದೆ. ತುಂಬಾ ವರ್ಷಗಳ ನಂತರ ಪಾಕಿಸ್ತಾನಕ್ಕೆ ಮರಳುತ್ತಿರುವುದು ನನಗೆ ಸಂತಸ ತಂದಿದೆ ಎಂದು ನವಾಜ್ ಷರೀಪ್​ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts