ಭದ್ರತಾ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಬಾಂಬ್​ ಇಟ್ಟ ನಕ್ಸಲರು: ಚಾಲಕ ಸೇರಿ 9 ಮಂದಿ ದುರ್ಮರಣ | Naxalites

dk - 2025-01-06T165225.730
Published on

ಛತ್ತಿಸ್​ಗಢ: ಕಾರ್ಯಚರಣೆ ಮುಗಿಸಿ ವಾಹನದಲ್ಲಿ ಹಿಂತಿರುಗುತ್ತಿದ್ದ ವೇಳೆ ನಕ್ಸಲರು(Naxalites) ಇಟ್ಟಿದ ಬಾಂಬ್​​ ಸ್ಫೋಟಗೊಂಡ ಹಿನ್ನೆಲೆ 8 ಜನ ಜಿಲ್ಲಾ ಮೀಸಲು ಅರಣ್ಯ ಸಿಬ್ಬಂದಿ ಮತ್ತು ಚಾಲಕ ಸೋಮವಾರ ಮೃತಪಟ್ಟಿದ್ದಾರೆ.

ಛತ್ತಿಸ್​ಗಢದ ದಾಂತೆವಾಡ, ನಾರಾಯಣಪುರ ಮತ್ತು ವಿಜಯಪುರ ಜಿಲ್ಲೆಗಳ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಾರ್ಯಚರಣೆ ಮುಗಿಸಿ ಬೆಸ್​​ ಕ್ಯಾಂಪ್​ಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ವಿಜಯಪುರ ಜಿಲ್ಲೆಯ ಬೇದ್ರೆ-ಕುಟ್ರು ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.

ಜನವರಿ 6 ರಂದು ಮಧ್ಯಾಹ್ನ 2.15 ರ ಸುಮಾರಿಗೆ ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಅಪರಿಚಿತ ಮಾವೋವಾದಿಗಳು ಐಇಡಿ ಸ್ಫೋಟಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಬಸ್ತಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಭದ್ರತಾ ಸಿಬ್ಬಂದಿ ಮೇಲೆ ನಕ್ಸಲೀಯರು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 26, 2023 ರಂದು, ನೆರೆಯ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ನಕ್ಸಲರು ತಮ್ಮ ವಾಹನವನ್ನು ಸ್ಫೋಟಿಸಿದ ನಂತರ ಹತ್ತು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಚಾಲಕ ಸಾವನ್ನಪ್ಪಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net