ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಕುತ್ತು

ನಾಯಕನಹಟ್ಟಿ: ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯರ ಆರೋಗ್ಯ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಡಿ.ಭೂತಪ್ಪ ತಿಳಿಸಿದರು.

ಪಟ್ಟಣದ 8, 9ನೇ ವಾರ್ಡ್‌ನಲ್ಲಿ ಶನಿವಾರ ಆಯೋಜಿಸಿದ್ದ ನಮ್ಮ ಚಿತ್ತ ಸ್ವಚ್ಛತೆಯತ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಳಸಿ ಬಿಸಾಡುವ ಪ್ಲಾಸ್ಟಿಕ್ ಚೀಲ, ಲೋಟ ಬಳಕೆ ಕೈಬಿಡಬೇಕು. ಬಟ್ಟೆ ಕೈಚೀಲ ಬಳಸುವ ಮೂಲಕ ಪ್ಲಾಸ್ಟಿಕ್‌ಗೆ ಕಡಿವಾಣ ಹಾಕಬೇಕು. ಮನೆ ಸುತ್ತ ಪರಿಸರದ ನೈರ್ಮಲ್ಯ ಕಾಪಾಡುವ ಜತೆ ಗಿಡ ಬೆಳೆಸುವ ಮೂಲಕ ಪ್ರಕೃತಿ ಪೋಷಿಸಬೇಕು ಎಂದು ಸಲಹೆ ನೀಡಿದರು.

ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್ ಬಳಕೆಗೆ ಸರ್ಕಾರ ಕಡ್ಡಾಯ ನಿಷೇಧ ಹೇರಿದೆ. ತ್ಯಾಜ್ಯ ವಿಲೇವಾರಿಗೆ ಹಸಿ ಹಾಗೂ ಒಣ ಕಸ ವಿಂಗಡಣೆಗೆ ಅಗತ್ಯ ಕ್ರಮಕೈಗೊಂಡಿದೆ. ಪ್ರತಿ ಮನೆಯಿಂದ ಒಣ ಹಾಗೂ ಹಸಿ ಕಸ ಪ್ರತ್ಯೇಕವಾಗಿ ಸಂಗ್ರಹಿಸಿ ಪೌರ ಸಿಬ್ಬಂದಿಗೆ ನೀಡಬೇಕು ಎಂದು ಮನವಿ ಮಾಡಿದರು.

ಸದಸ್ಯರಾದ ಎಸ್.ಕೃಷ್ಣಮೂರ್ತಿ, ಮಂಜುಳಾ ಶೀಕಾಂತ್, ಟಿ.ಬಸಣ್ಣ, ಜೆ.ಆರ್.ರವಿಕುಮಾರ್ ಹಾಗೂ ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *