More

    ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಆದ್ಯತೆ

    ನಾಯಕನಹಟ್ಟಿ: ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಲಾಗವುದು ಎಂದು ಪಪಂ ಮುಖ್ಯಾಧಿಕಾರಿ ಡಿ.ಭೂತಪ್ಪ ಹೇಳಿದರು.

    ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಎಲ್ಲೆಡೆ ಕೋವಿಡ್-19 ಹರಡುತ್ತಿದ್ದರೂ ಪೌರಕಾರ್ಮಿಕರು ಜೀವದ ಹಂಗು ತೊರೆದು ನಿರಂತರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಇವರಿಂದಾಗಿ ಸೋಂಕು ನಿಯಂತ್ರಣದಲ್ಲಿದೆ. ಹೀಗಾಗಿ ಅವರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿ ಮತ್ತು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಆದೇಶದ ಮೇರೆಗೆ ಪಪಂ ಸಿಬ್ಬಂದಿ, ಮೂವತ್ತಕ್ಕೂ ಹೆಚ್ಚು ಪೌರಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.

    ಪಪಂ ಆರೋಗ್ಯ ನಿರೀಕ್ಷಕ ಟಿ.ರುದ್ರಮುನಿ ಮಾತನಾಡಿ, ಪ್ರತಿ 15 ದಿನಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಿ ಪೌರಕಾರ್ಮಿಕರ ಆರೋಗ್ಯದಲ್ಲಿ ಉಂಟಾಗುವ ಏರುಪೇರುಗಳನ್ನು ಗಮನಿಸಲಾಗುತ್ತಿದೆ. ಜತೆಗೆ ಅವರಿಗೆ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.

    ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿಕಾಸ್, ಶುಶ್ರೂಷಕಿ ನಾಗಭೂಷಣಮ್ಮ, ನವೀನ್, ಪಪಂ ಸಿಬ್ಬಂದಿ ಎಂ.ಎಸ್.ಸುರೇಶ್, ಟಿ.ತಿಪ್ಪೇಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts