More

    ಹಟ್ಟಿಗೆ ಜಾತ್ರೆಗೆ ವಿಧ್ಯುಕ್ತ ಚಾಲನೆ

    ನಾಯಕನಹಟ್ಟಿ: ಪಟ್ಟಣದಲ್ಲಿ ಮಾ.12ರಂದು ಜರುಗುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಗುರುವಾರ ಸ್ವಾಮಿಯ ಕಂಕಣಧಾರಣ ಮಹೋತ್ಸವ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.

    ಸಂಜೆಯಿಂದಲೇ ಒಳಮಠವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ರಾತ್ರಿ 8 ಗಂಟೆಗೆ ಉತ್ಸವ ಮೂರ್ತಿಯನ್ನು ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಪ್ರತಿಷ್ಟಾಪಿಸಿ ಕಂಕಣಧಾರಣ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಧಾರ್ಮಿಕ ಕಾರ್ಯಗಳು ಜರುಗಿದವು.

    ಜಾತ್ರೆಯು ಸುಗಮವಾಗಿ ಜರುಗಲು ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮದ ಪ್ರಮುಖರು, ಗ್ರಾಮಸ್ಥರು ಕಂಕಣ ಬದ್ಧವಾಗಿ ಕಾರ್ಯನಿರ್ವಹಿಸಲು ಕಂಕಣವನ್ನು ಕಟ್ಟಲಾಯಿತು. ಬಳಿಕ ಸ್ವಾಮಿಯ ಪಲ್ಲಕ್ಕಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ ಮೆರವಣಿಗೆ ಮಾಡುವ ಪ್ರಾಕಾರೋತ್ಸವ ಸಂಭ್ರಮ ಸಡಗರದಿಂದ ಜರುಗಿತು.

    ಪ್ರಾಕಾರೋತ್ಸವದಲ್ಲಿ ಭಕ್ತರು ದೇವರಿಗೆ ಹಣ್ಣು ಕಾಯಿ ನೀಡುವುದರೊಂದಿಗೆ ಪಲ್ಲಕ್ಕಿಗೆ ಚೂರು ಬೆಲ್ಲ ಮೆಣಸು ತೂರಿ ಭಕ್ತಿ ಸಮರ್ಪಿಸಿದರು. ನಂದೀಧ್ವಜ ಕುಣಿತ, ಕರಡಿವಾದ್ಯ, ಪಂಜಿನ ಸೇವೆ ಭಕ್ತರನ್ನು ಆಕರ್ಷಿಸಿದವು.

    ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಪಿ.ರವಿಶಂಕರ್, ತಹಸೀಲ್ದಾರ್ ಮಲ್ಲಿಕಾರ್ಜುನ, ಕಾರ್ಯನಿರ್ವಾಹಕ ಅಧಿಕಾರಿ ಎಸ್‌ಪಿಬಿ ಮಹೇಶ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts