More

    ವೈಯಕ್ತಿಕ ಸ್ವಚ್ಛತೆ ಕಾಪಾಡಿ ರೋಗಗಳಿಂದ ದೂರವಿರಿ

    ನಾಯಕನಹಟ್ಟಿ: ಪರಿಸರ ಹಾಗೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಕರೊನಾದಂತಹ ಮಾರಣಾಂತಿಕ ರೋಗಗಳಿಂದ ದೂರವಿರಬಹುದು ಎಂದು ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಓಬಣ್ಣ ಹೇಳಿದ್ದಾರೆ.

    ಸಮೀಪದ ನಲಗೇತನಹಟ್ಟಿಯಲ್ಲಿ ಶನಿವಾರ ರಾಸಾಯನಿಕ ಸಿಂಪಡಣೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಥರ್ಮಲ್ ಸ್ಕ್ಯಾನರ್ ನೀಡಲಾಗಿದೆ. ಜತೆಗೆ ರಾಸಾಯನಿಕ ಸಿಂಪರಣೆಗೆ ಅಗತ್ಯ ವಸ್ತುಗಳನ್ನು ಸಿದ್ಧಗೊಳಿಸಲಾಗಿದೆ. ಇದಕ್ಕೆ ಗ್ರಾಪಂಗಳು ಸಹಕಾರ ನೀಡಬೇಕು. ಆಶಾ ಹಾಗೂ ಆರೋಗ್ಯ ಸಿಬ್ಬಂದಿ ಪ್ರತಿ ಮನೆಗೆ ಭೇಟಿ ನೀಡಬೇಕು. ಅನ್ಯ ಜಿಲ್ಲೆ ಅಥವಾ ರಾಜ್ಯದಿಂದ ಬಂದವರ ಮೇಲೆ ಹೆಚ್ಚಿನ ಗಮನ ಹರಿಸಬೇಕು. ದೂರದ ಊರುಗಳಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

    ಗ್ರಾಪಂ ಅಧ್ಯಕ್ಷ ಮುತ್ತಯ್ಯ, ಸಿಬ್ಬಂದಿಗಳಾದ ರುದ್ರಮುನಿ, ರಮೇಶ್, ಅಬುಸಲೇಂ, ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts