More

    ಭೂ ಅಭಿವೃದ್ಧಿ, ಕೆರೆಗಳ ಪುನಶ್ಚೇತನಕ್ಕೆ ಆದ್ಯತೆ

    ನಾಯಕನಹಟ್ಟಿ: ಕೂಲಿ ಕಾರ್ಮಿಕರಿಗೆ ನೆರವಾಗುವ ದೃಷ್ಟಿಯಿಂದ ನರೇಗಾ ಯೋಜನೆಯಡಿ ಬದು ನಿರ್ಮಾಣ, ಭೂ ಅಭಿವೃದ್ಧಿ, ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.

    ಸಮೀಪದ ನೇರಲಗುಂಟೆಯಲ್ಲಿ ಮಂಗಳವಾರ ಕೃಷಿ ಹೊಂಡ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು.

    ಕೃಷಿ ಹೊಂಡಗಳ ನಿರ್ಮಾಣಕ್ಕೆ ಸಾಕಷ್ಟು ಹಣ ಕಾಯ್ದಿರಿಸಲಾಗಿದೆ. ಬಯಲು ಸೀಮೆ ಪ್ರದೇಶದಲ್ಲಿ ಅಂತರ್ಜಲ ಪುನಶ್ಚೇತನಕ್ಕೆ ಕೃಷಿ ಹೊಂಡಗಳ ಅವಶ್ಯಕತೆ ಇದೆ. ಕೆಲವೆಡೆ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿವೆ ಎನ್ನುವ ದೂರುಗಳಿದ್ದು, ಏಜೆನ್ಸಿ ವತಿಯಿಂದ ತುರ್ತು ದುರಸ್ತಿ ಕಾರ್ಯ ನಡೆಯುತ್ತಿದೆ ಎಂದರು.

    14 ನೇ ಹಣಕಾಸು ಯೋಜನೆಯ ಹಣದ ಬಳಕೆ ವಿಚಾರವಾಗಿ ಗ್ರಾಪಂಗಳಿಗೆ ಪರಮಾಧಿಕಾರ ನೀಡಲಾಗಿದೆ. ಅನುದಾನ ಹಲವೆಡೆ ಸೂಕ್ತ ರೀತಿಯಲ್ಲಿ ಬಳಕೆಯಾದರೆ, ಕೆಲವೆಡೆ ದುರುಪಯೋಗಕ್ಕೆ ದಾರಿ ಮಾಡಿಕೊಟ್ಟಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂದರು.
    ಸದಸ್ಯೆ ಎಚ್.ಪಿ.ಶಶಿರೇಖಾ ಮಾತನಾಡಿ, ನೇರಲಗುಂಟೆ ಗ್ರಾಪಂ ವ್ಯಾಪ್ತಿಯಲ್ಲಿ ಹಳ್ಳಿಗಳಿಗೆ ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ಉಣ್ಣೆ ಸಂಗ್ರಹಕ್ಕೆ ಇಲ್ಲಿನ ಗೋದಾಮು ಶಿಥಿಲಾವಸ್ಥೆಯಲ್ಲಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರು.

    ತಾಪಂ ಸದಸ್ಯ ಕೆ.ತಿಪ್ಪೇಸ್ವಾಮಿ, ಗ್ರಾಪಂ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಚನ್ನಪ್ಪ, ಗ್ರಾಪಂ ಪಿಡಿಒ ಮೂರ್ತಿ, ಕೆಪಿಸಿಸಿ ಸದಸ್ಯ ಸುರೇಶ್‌ಬಾಬು, ನೇಕಾರ ಸಂಘದ ಅಧ್ಯಕ್ಷ ಮಚ್ಚೇಂದ್ರಪ್ಪ, ಉಪಾಧ್ಯಕ್ಷ ಮಂಜುನಾಥ್, ಮುಖಂಡ ಶಂಕರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts