More

    ಸೋಷಿಯಲ್ ಮಿಡಿಯಾ ಅಪಾಯ

    ನಾಯಕನಹಟ್ಟಿ: ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ವಿದ್ಯಾರ್ಥಿಗಳು ಅದರ ನೆರವಿನಿಂದ ಉತ್ತಮ ಜ್ಞಾನ ಪಡೆದುಕೊಂಡು ಭವಿಷ್ಯ ಹಸನು ಮಾಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಸಲಹೆ ನೀಡಿದರು.

    ಸಮೀಪದ ತುರುವನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಉಚಿತವಾಗಿ ವಿತರಿಸಿ ಮಾತನಾಡಿ, ಸಾಮಾಜಿಕ ಜಾಲತಾಣಕ್ಕೆ ಜೋತುಬಿದ್ದು ವಿದ್ಯಾರ್ಥಿಗಳು ಇಂದು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಬಳಸಲೇ ಬಾರದು ಎಂದರು.

    ಲ್ಯಾಪ್‌ಟಾಪ್‌ನಿಂದ ನಿಮ್ಮ ಪಠ್ಯಕ್ರಮಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಅಂತರ್ಜಾಲದ ಮೂಲಕ ಪಡೆದುಕೊಳ್ಳಬಹುದು. ಈಗ ಕಂಪ್ಯೂಟರ್ ಜ್ಞಾನ ಎಲ್ಲ ಕ್ಷೇತ್ರಗಳಲ್ಲಿ ಅತ್ಯವಶ್ಯ. ಆದ್ದರಿಂದ ಕಂಪ್ಯೂಟರ್ ಬಳಸುವಲ್ಲಿ ನಿಮ್ಮ ಉಪನ್ಯಾಸಕರ ಮಾರ್ಗದರ್ಶನ ಪಡೆದುಕೊಳ್ಳಿರಿ ಎಂದು ತಿಳಿಸಿದರು.

    ಇಂದು ಗ್ರಾಮೀಣ ಪ್ರದೇಶದಲ್ಲಿಯೂ ಉತ್ತಮ ಶಿಕ್ಷಣ ಸಿಗುತ್ತಿದ್ದು, ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.

    ಪ್ರಾಂಶುಪಾಲ ಸುರೇಶ್ ಮಾತನಾಡಿ, ಪಠ್ಯಕ್ರಮಕ್ಕೆ ಬೇಕಾದ ವಿಷಯಗಳು ಅಂತರ್ಜಾಲದಲ್ಲಿ ದೊರಕುತ್ತಿದ್ದು, ಲ್ಯಾಪ್‌ಟ್ಯಾಪ್ ಮೂಲಕ ವಿಷಯ ಸಂಗ್ರಹಿಸಿರಿ, ಜ್ಞಾನವನ್ನು ವೃದ್ಧಿಸಿಕೊಳ್ಳಿರಿ. ಇದರಿಂದ ನಿಮ್ಮ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಅನುಕೂಲವಾಗುತ್ತದೆ ಎಂದು ತಿಳಿಸಿದರು.

    ಕನ್ನಡ ಪ್ರಾಧ್ಯಾಪಕ ಮುರಳಿ, ಜಿಪಂ ಮಾಜಿ ಸದಸ್ಯ ಬಾಬುರೆಡ್ಡಿ, ಪಿ.ನಾಗರಾಜಪ್ಪ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ರುದ್ರಮ್ಮ ಲಕ್ಷ್ಮಣ್, ಸದಸ್ಯರಾದ ಶರಣಪ್ಪ, ತಿಪ್ಪೇಸ್ವಾಮಿ, ರತ್ನಮ್ಮ, ಮುಖಂಡರಾದ ಸಂತೋಷ್, ಮಂಜುನಾಥ್, ಶಂಶುದ್ದೀನ್, ಚಂದ್ರಣ್ಣ ಇದ್ದರು.

    ಪದವಿ ಪ್ರಥಮ ವರ್ಷದ 18 ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ವಿತರಣೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts