More

    ಚೆಕ್‌ಪೋಸ್ಟ್‌ನಲ್ಲಿ ಬಿಗಿ ತಪಾಸಣೆ

    ನಾಯಕನಹಟ್ಟಿ: ಗಡಿಭಾಗದಲ್ಲಿರುವ ಚೆಕ್‌ಪೋಸ್ಟ್‌ಗಳ ಮೂಲಕ ಸಂಚರಿಸುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ್ ಹೇಳಿದರು.

    ಪಟ್ಟಣದ ಜಗಳೂರು ರಸ್ತೆಯಲ್ಲಿರುವ ಚೆಕ್‌ಪೋಸ್ಟ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ವೇಳೆ ಮಾತನಾಡಿ, ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ಜಿಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ ಎಂದರು.

    ಅಂತರ ರಾಜ್ಯ ಮತ್ತು ಅಂತರ ಜಿಲ್ಲೆಗಳ ಮಧ್ಯೆ ಸಂಚರಿಸುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪಡೆದ ಪಾಸ್ ಹೊಂದಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸೂಚಿಸಿದರು.

    ಪಕ್ಕದ ದಾವಣಗೆರೆ ನಗರದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದ್ದು, ದಾವಣಗೆರೆಯಿಂದ ಬರುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಅಲ್ಲಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಬೇಕು. ಚಿತ್ರದುರ್ಗ ಜಿಲ್ಲೆಯಿಂದ ದಾವಣಗೆರೆಗೆ ತೆರಳುವ ವಾಹನಗಳನ್ನು ಪಾಸ್ ಇಲ್ಲದೆ ಕಳುಹಿಸಬಾರದು ಎಂದು ಹೇಳಿದರು.

    ಕಾರ್ಮಿಕರನ್ನು ಸ್ವಂತ ರಾಜ್ಯಕ್ಕೆ ಕಳುಹಿಸಲು ಕ್ರಮ: ತಾಲೂಕಿನ ಹಲವು ಕೆರೆ ಅಂಗಳದಲ್ಲಿ ಇದ್ದಿಲು ಸುಡುವ ಕಾರ್ಮಿಕರು ಮಹಾರಾಷ್ಟ್ರದಿಂದ ಬಂದಿದ್ದು, ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಅವರನ್ನು ಮೇ 3ರ ನಂತರ ಸ್ವಗ್ರಾಮಗಳಿಗೆ ಕಳುಹಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದರು.

    ಪಪಂ ಸದಸ್ಯರಾದ ಎನ್.ಐ.ಮಹಮ್ಮದ್ ಮನ್ಸೂರ್, ಟಿ.ಬಸಣ್ಣ, ಚೆಕ್‌ಪೋಸ್ಟ್ ಸಿಬ್ಬಂದಿ ಅಣ್ಣಪ್ಪ, ಬೋರಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts