More

    ದಿನದ ಇಪ್ಪತ್ನಾಲ್ಕು ಗಂಟೆಯೂ ಆರೋಗ್ಯ ಸೇವೆ

    ನಾಯಕನಹಟ್ಟಿ: ಹಗಲಲ್ಲಿ ಮಾತ್ರವೇ ಆರೋಗ್ಯ ಸೇವೆ ಒದಗಿಸುತ್ತಿದ್ದ ನೆಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು.

    ಹೋಬಳಿಯ ನೆಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

    ನೆಲಗೇತನಹಟ್ಟಿ ಸುತ್ತಮುತ್ತಲಿನ ಗ್ರಾಮಗಳು ಹಿಂದುಳಿದ ಪ್ರದೇಶಗಳಾಗಿವೆ. ಈ ಭಾಗದ ಜನರಿಗೆ ಸಕಾಲಕ್ಕೆ ಗುಣಮಟ್ಟದ ಚಿಕಿತ್ಸೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 43 ಗ್ರಾಮಗಳಿದ್ದು, 42,706 ಜನಸಂಖ್ಯೆ ಇದ್ದು, 7 ಆರೋಗ್ಯ ಉಪಕೇಂದ್ರಗಳನ್ನು ಹೊಂದಿದೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಆಸ್ಪತ್ರೆಯನ್ನು ದಿನದ 24ಗಂಟೆ ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

    ಗ್ರಾಪಂ ಅಧ್ಯಕ್ಷ ಪಿ.ಎನ್. ಮುತ್ತಯ್ಯ ಮಾತನಾಡಿ, ಆಸ್ಪತ್ರೆಯು ವೈದ್ಯರು, ಸಿಬ್ಬಂದಿ, ಆಂಬ್ಯುಲೆನ್ಸ್, ಔಷಧ, ರಕ್ತಪರೀಕ್ಷೆ ಕೇಂದ್ರ, ಜನರೇಟರ್ ಇನ್ನಿತರ ಮೂಲಸೌಕರ್ಯಗಳಿಂದ ಸೊರಗಿದೆ ಎಂದು ತಿಳಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಪಾಲಾಕ್ಷ, ಆಸ್ಪತ್ರೆಗೆ ಶಾಶ್ವತವಾಗಿ ಒಂದು ಆಂಬುಲೆನ್ಸ್, ಶುಶ್ರೂಷಕರು, ವೈದ್ಯರ ನೇಮಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳು ಆಧಾರ್‌ಕಾರ್ಡ್ ತೆಗೆದುಕೊಂಡು ಬಂದರೆ ಸ್ಥಳದಲ್ಲೇ ಅಥವಾ ಸಮೀಪದ ಬಾಪೂಜಿ ಸೇವಾ ಕೇಂದ್ರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡಿಸಿಕೊಡಲಾಗುವುದು. ಇದರಿಂದ ಹಲವು ಕಾಯಿಲೆಗಳಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಲಭಿಸುತ್ತದೆ ಎಂದು ತಿಳಿಸಿದರು.

    ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ವೈದ್ಯಾಧಿಕಾರಿ ಡಾ. ಪ್ರವೀಣ್, ಗ್ರಾಮಸ್ಥರಾದ ಪೂರ್ಣಓಬಯ್ಯ, ತಿಪ್ಪೇಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts