16 C
Bangalore
Saturday, December 7, 2019

ಚನ್ನಬಸಯ್ಯನಹಟ್ಟಿ ಶಿಕ್ಷಕರು ಎತ್ತಂಗಡಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನಾಯಕನಹಟ್ಟಿ: ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಬಸಯ್ಯನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ಶಿಕ್ಷಕರನ್ನು ಬೇರೆಡೆ ನಿಯೋಜಿಸಲು ಬಿಇಒ ಅವರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಹೇಳಿದರು.

ಚನ್ನಬಸಯ್ಯನಹಟ್ಟಿಯಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿ, ಶಾಲೆಯಲ್ಲಿ ಇದು ಆಕಸ್ಮಿಕ ಘಟನೆ. ಈ ಬಗ್ಗೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಶಾಲೆಯಲ್ಲಿ ಹೊಸದಾಗಿ ಬಂದಿರುವ ಇಬ್ಬರು ಶಿಕ್ಷಕರನ್ನು ಹೊರತುಪಡಿಸಿ ಮುಂಚಿನಿಂದಲೂ ಕಾರ್ಯನಿರ್ವಹಿಸುತ್ತಿದ್ದ ನಾಲ್ವರನ್ನು ಬೇರೆಡೆ ನಿಯೋಜಿಸಲಾಗುವುದು. ಈ ಕುರಿತು ಒಂದೆರಡು ದಿನಗಳಲ್ಲಿ ಬಿಇಒ ಆದೇಶ ನೀಡಲಿದ್ದಾರೆ. ಪಾಲಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ಶಾಲೆಯ ನಾಲ್ವರು ಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಿ ಬೇರೆಯವರನ್ನು ನಿಯೋಜಿಸಲಾಗುವುದು ಎಂದರು.

ನಾಯಕನಹಟ್ಟಿ, ಚಳ್ಳಕೆರೆ ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿರುವ ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದೆ. ಅಡುಗೆ ಸಿಬ್ಬಂದಿ ಬದಲಿಸಬೇಕೆಂದು ಕೆಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಸ್‌ಡಿಎಂಸಿ ಹಾಗೂ ಸ್ಥಳೀಯ ಪಪಂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಂಡು ನಿರ್ಣಯ ಅಂಗೀಕರಿಸಿದರೆ ಎಲ್ಲ ಅಡುಗೆ ಸಿಬ್ಬಂದಿ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ತಹಸೀಲ್ದಾರ್, ಬಿಇಒ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರೊಂದಿಗೆ ಚರ್ಚೆ ನಂತರ ಶಾಲೆ ಹಾಗೂ ಬಿಸಿಯೂಟ ಕಾರ್ಯ ಆರಂಭವಾಯಿತು.

ಅಕ್ಷರ ಸಹಾಯಕ ನಿರ್ದೇಶಕ ಎಂ.ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಈರಸ್ವಾಮಿ, ಪಿಎಸ್‌ಐ ರಘುನಾಥ್, ಉಪ ತಹಸೀಲ್ದಾರ್ ಜಗದೀಶ್, ಗ್ರಾಮಲೆಕ್ಕಿಗ ಉಮಾ, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೇಶ್ ಮತ್ತಿತರರಿದ್ದರು.

ಅಸ್ವಸ್ಥ ಮಕ್ಕಳ ಚೇತರಿಕೆ: ಅಸ್ವಸ್ಥರಾಗಿದ್ದ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ಡಿಎಚ್‌ಒ ಡಾ.ಪಾಲಾಕ್ಷ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ಊಟದ ಶಾಲೆ 162 ಮಕ್ಕಳಲ್ಲಿ 54 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ತಕ್ಷಣವೇ ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ 30 ಹಾಗೂ ಜಿಲ್ಲಾ ಆಸ್ಪತ್ರೆಗೆ 24 ಮಕ್ಕಳನ್ನು ದಾಖಲಿಸಲಾಗಿತ್ತು. ನಾಯಕನಹಟ್ಟಿಯಲ್ಲಿ ಚಿಕಿತ್ಸೆ ಪಡೆದ 30 ಮಕ್ಕಳು ಗುಣಮುಖರಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿದ್ದವರ ಪೈಕಿ 17 ಮಕ್ಕಳು ಸಂಪೂರ್ಣ ಗುಣಮುಖರಾಗಿದ್ದು, 7ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...