More

    ಕರೊನಾ ಸೇನಾನಿ ಸೇವೆ ಸ್ಮರಿಸಿ

    ನಾಯಕನಹಟ್ಟಿ: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕರೊನಾ ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಸೇನಾನಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಜನತೆ ಮಾಡಬೇಕಿದೆ ಎಂದು ಕಾಗಿನೆಲೆ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

    ತುರುವನೂರು ಗ್ರಾಮದಲ್ಲಿ ಗುರುವಾರ ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.

    ಆಶಾ, ಅಂಗನವಾಡಿ ಕಾರ್ಯಕರ್ತರು ಸೋಂಕು ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರಿಲ್ಲದಿದ್ದರೆ ಬಹು ಸಂಖ್ಯೆಯ ಜನರು ಸಾವಿಗೀಡಾಗಬೇಕಿತ್ತು. ಇವರ ಸೇವೆಯನ್ನು ಎಲ್ಲರೂ ಸ್ಮರಿಸಬೇಕು ಎಂದರು.

    ಶಾಸಕ ಟಿ.ರಘುಮೂರ್ತಿ ಮಾತನಾಡಿ, ಲಾಕ್‌ಡೌನ್ ಜಾರಿ ಆದಾಗಿಂದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಸಾಧಿಸಿ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ವೈರಸ್ ನಿಯಂತ್ರಣ ಸಾಧ್ಯವಾಗಿದೆ ಎಂದು ಹೇಳಿದರು.

    ಈಗ ದಾನಿಗಳ ಸಹಕಾರದಿಂದ ದಿನಸಿ ಕಿಟ್ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ 4 ಸಾವಿರ ಅಂಗವಿಕಲರಿಗೂ ದಿನಸಿ ಆಹಾರ ಪದಾರ್ಥ ವಿತರಿಸಲು ಯೋಜಿಸಲಾಗಿದೆ ಎಂದರು.

    ಭಗೀರಥ ಮಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ಎಲ್ಲರ ಸಹಕಾರದಿಂದ ಚಿತ್ರದುರ್ಗ ಜಿಲ್ಲೆ ಹಸಿರುವ ವಲಯಕ್ಕೆ ಒಳಪಟ್ಟಿದೆ. ಇದು ಹೀಗೆಯೇ ಮುಂದುವರಿಯುವಂತೆ ಜನತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

    ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಜಿಪಂ ಮಾಜಿ ಸದಸ್ಯ ಬಾಬುರೆಡ್ಡಿ, ತಾಪಂ ಇಒ ಕೃಷ್ಣಾನಾಯ್ಕಾ, ಸದಸ್ಯರಾದ ಬಿ.ಬೋರಯ್ಯ, ತಿಪ್ಪಮ್ಮ, ಗ್ರಾಪಂ ಅಧ್ಯಕ್ಷೆ ರುದ್ರಮ್ಮ, ಉಪಾಧ್ಯಕ್ಷೆ ಅರುಣಮ್ಮ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts