More

    ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ 

    ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ 

    ಚಿತ್ರದುರ್ಗ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಲಕ್ಷಾಂತರ ಭಕ್ತರು ಭಕ್ತಿ ಭಾವ ಸಮರ್ಪಿಸಿ ಪುನೀತ ರಾದರು. ಶುಕ್ರವಾರ ಮಧ್ಯಾಹ್ನ 3.45ರ ಹೊತ್ತಿಗೆ ಚಿತ್ತಾ ನಕ್ಷತ್ರದಲ್ಲಿ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ಬೀದಿಯಿಂದ ಹೊರ ಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು.

    ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುತ್ತಿದ್ದ ರಥಕ್ಕೆ ಭಕ್ತರು ರಥಕ್ಕೆ ಬಾಳೆಹಣ್ಣು,ಕಾಳಮೆಣಸು,ಧವನ,ಹೂವು,ಬೆಲ್ಲ ಸಮರ್ಪಿಸಿ ಇಷಾರ್ಥ ಈಡೇರಿಕೆಗೆ ಪ್ರಾರ್ಥಿಸಿದರು. ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ,ಕಾಯಕ ಯೋಗಿಗೆ ಜಯವಾಗಲಿ ಜಯಘೋಷಗಳೊಂದಿಗೆ ತೇರನ್ನು ಎಳೆದು ಧನ್ಯರಾದರು.

    ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಈ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಸುಡುವ ಬಿಸಿಲನ್ನು ಲೆಕ್ಕಿಸದೆ ಹಟ್ಟಿ ತಿಪ್ಪೇಶನ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಗ್ಗೆಯಿಂದಲೇ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಲಕ್ಷಾಂತರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದರು. ಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು.

    55 ಲಕ್ಷ ರೂ.ಗೆ ಮುಕ್ತಿಭಾವುಟ ಹರಾಜು
    ಮುಕ್ತಿ ಭಾವುಟದ ಹರಾಜು ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿದ್ದರು. ಮಾಜಿ ಸಚಿವ ಡಿ.ಸುಧಾಕರ್ ಅವರು 55 ಲಕ್ಷ ರೂ.ಗೆ ಮುಕ್ತಿ ಬಾವುಟವನ್ನು ಹರಾಜಿನಲ್ಲಿ ಪಡೆದುಕೊಂಡರು. ನಂತರ ದೊಡ್ಡ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ,ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ,ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ,ದೇವಸ್ಥಾನದ ಕಾರ್ಯನಿರ್ವಹಣಾ ಅಧಿ ಕಾರಿ ಗಂಗಾಧರ್ ಸೇರಿದಂತೆ ಹಲವು ಗಣ್ಯರು,ಅಧಿಕಾರಿಗಳಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts