More

  ಸಂಘಟಿತ ಹೋರಾಟ ಅಗತ್ಯ

  ನಾಯಕನಹಟ್ಟಿ: ವಾಲ್ಮೀಕಿ ಸಮುದಾಯದ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ಅಗತ್ಯ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

  ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಜಾತ್ರೆಯ ಕರಪತ್ರ ಹಾಗೂ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

  ರಾಜ್ಯದ 200 ವಿಧಾನಸಭೆ ಕ್ಷೇತ್ರಗಳಲ್ಲಿ ನಾಯಕ ಸಮುದಾಯ ಪ್ರಾಬಲ್ಯವಿದ್ದು, ಶಾಸಕರನ್ನು ಗೆಲ್ಲಿಸುವ ಸಾಮರ್ಥ್ಯವಿದೆ. ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡುವಲ್ಲಿ ಕಳೆದ 72 ವರ್ಷಗಳಿಂದ ಹಲವು ಸರ್ಕಾರಗಳು ವಿಫಲವಾಗಿವೆ ಎಂದು ದೂರಿದರು.

  ಜಿಪಂ ಮಾಜಿ ಸದಸ್ಯ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಅವರನ್ನು ವಾಲ್ಮೀಕಿ ಜಾತ್ರೆ ಕಾರ್ಯಕಾರಿ ಹೋಬಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts