

ಮಂಚು ವಿಷ್ಣು ಅವರ ದುಬಾರಿ ಪ್ರಾಜೆಕ್ಟ್ ಭಕ್ತ ಕಣ್ಣಪ್ಪ ಚಿತ್ರದಲ್ಲಿ ಪ್ಯಾನ್-ಇಂಡಿಯನ್ ಸ್ಟಾರ್ ಪ್ರಭಾಸ್ ಸಣ್ಣ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನೋದು ಈಗಾಗಲೇ ತಿಳಿದು ಬಂದಿದೆ.
ವಾನ್ ಚಿತ್ರದಲ್ಲಿ ಶಾರುಖ್ ಖಾನ್‌ಗೆ ನಾಯಕಿಯಾಗಿ ಕಾಣಿಸಿಕೊಂಡ ನಯನತಾರಾ ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೌದು ಪ್ರಭಾಸ್ ಚಿತ್ರದಲ್ಲಿ ಲೇಡಿ ಸೂಪರ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದಲ್ಲಿ ಹಿರಿಯ ನಟಿ ಮಧುಬಾಲಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್ ಮತ್ತು ನಯನತಾರಾ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋ ವಿಚಾರವೂ ಇದೀಗ ತಿಳಿದು ಬಂದಿದೆ.
ಚಿತ್ರದಲ್ಲಿ ಪ್ರಭಾಸ್ ಶಿವನಾಗಿ ಕಾಣಿಸಿಕೊಳ್ಳಲಿದ್ದಾರೆ ಮತ್ತು ಪಾರ್ವತಿ ಪಾತ್ರದಲ್ಲಿ ನಯನತಾರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಚಿತ್ರವನ್ನ ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸುತ್ತಿದ್ದು, ಚಿತ್ರದ ನಾಯಕಿ ನೂಪುರ್ ಸನೋನ್ ಚಿತ್ರದಿಂದ ಹೊರನಡೆದಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕಿಯ ವಿವರಗಳನ್ನು ನಿರ್ಮಾಪಕರು ಪ್ರಕಟಿಸಲಿದ್ದಾರೆ.
ಚಿತ್ರದಲ್ಲಿ ನಟಿಸಲು ಲೇಡಿ ಸೂಪರ್ ಸ್ಟಾರ್ ನಯನತಾರಾ ಸಹ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಯೋಗಿ ಚಿತ್ರದಲ್ಲಿ ಪ್ರಭಾಸ್ ಹಾಗೂ ನಯನತಾರಾ ಇಬ್ಬರೂ ಜೊತೆಯಾಗಿ ನಟಿಸಿದ್ದರು. ಇದೀಗ 16 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಒಂದಾಗಲಿದ್ದು, ಇದು ಸಹಜವಾಗಿಯೇ ಅಭಿಮಾನಿಗಳಲ್ಲಿ ಖುಷಿಯನ್ನು ಹೆಚ್ಚಿಸಿದೆ.
ಶೀಘ್ರದಲ್ಲೇ ಹೊಸ ನಾಯಕಿಯ ವಿವರಗಳನ್ನು ನಿರ್ಮಾಪಕರು ಪ್ರಕಟಿಸಲಿದ್ದಾರೆ. ಮಂಚು ವಿಷ್ಣು ಅವರ 24 ಫ್ರೇಮ್ಸ್ ಫ್ಯಾಕ್ಟರಿ ಭಕ್ತ ಕಣ್ಣಪ್ಪ ಚಿತ್ರವನ್ನು ನಿರ್ಮಾಣ ಮಾಡಲಿದೆ.