

ಚೆನ್ನೈ: ತಮಿಳು ಚಿತ್ರರಂಗದ ಸ್ಟಾರ್ ನಟಿ ನಯನತಾರ ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿದ್ದಾರೆ. ತಾಯಿಯಾಗಿರುವ ಖುಷಿಯ ವಿಚಾರವನ್ನು ನಯನತಾರ ಪತಿ ವಿಘ್ನೇಶ್ ಶಿವನ್ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಈ ಸುದ್ದಿ ಕೇಳುತ್ತಿದ್ದಂತೆ ನಯನತಾರ ಅಭಿಮಾನಿಗಳು ಖುಷಿಯಾಗಿದ್ದಾರೆ.
ನಯನತಾರ-ವಿಘ್ನೇಶ್ ಶಿವನ್ ದಂಪತಿಗಳಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಬರುತ್ತಿವೆ. ವಿಘ್ನೇಶ್ ಶಿವನ್ ಸಾಮಾಜಿಕ ಜಾಲತಾಣದಲ್ಲಿ ಅವಳಿ ಮಕ್ಕಳ ಫೋಟೋ ಶೇರ್ ತಮ್ಮ ಮನೆಯ ಹೊಸ ಸದಸ್ಯರನ್ನು ಸ್ವಾಗತಿಸಿದ್ದಾರೆ.
ಏಳು ವರ್ಷಗಳ ಡೇಟಿಂಗ್ ನಂತರ ನಟಿ ನಯನತಾರ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೂನ್ 9ರಂದು ವಿವಾಹವಾಗಿದ್ದರು. ಇದೀಗ ಈ ದಂಪತಿ ತಂದೆ-ತಾಯಿಯಾದ ಸಂಭ್ರಮದಲ್ಲಿದ್ದಾರೆ.