ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಶರದ್​ ಪವಾರ್​

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷ (ಎನ್​ಸಿಪಿ) ಅಧ್ಯಕ್ಷ ಶರದ್​ ಪವಾರ್​ ಘೋಷಿಸಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಶರದ್​ ಪವಾರ್​ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್​ ‘ನಮ್ಮ ಕುಟುಂಬದಿಂದ ಮಗಳು ಸುಪ್ರಿಯಾ ಸುಳೆ ಮತ್ತು ಮೊಮ್ಮಗ ಪಾರ್ಥ ಪವಾರ್​ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ನಾನು 14 ಬಾರಿ ಸ್ಪರ್ಧೆ ಮಾಡಿದ್ದೇನೆ ಹಾಗಾಗಿ ನಾನು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಲು ಇದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ.

ಶರದ್​ ಪವಾರ್​ ಅವರು 2014ರ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಿರಲಿಲ್ಲ. (ಏಜೆನ್ಸೀಸ್​)