ಮಹಾರಾಷ್ಟ್ರ ರಾಜಕೀಯ; ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ncp
Published on

-ಸಿಎಂ ಶಿಂಧೆ ಸರ್ಕಾರಕ್ಕೆ ಅಜಿತ್​​ ಪವಾರ್​​ ಬೆಂಬಲ

ಮಹಾರಾಷ್ಟ್ರ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಿತ್ ಪವಾರ್ ಭಾನುವಾರ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಗೊಂಡರು ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್​ಸಿಪಿಯ ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪವಾರ್ ಅವರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲಿದ್ದಾರೆ. ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ಮುಖಂಡರು ಮತ್ತು ಶಾಸಕರೊಂದಿಗೆ ಪವಾರ್ ಸಭೆ ನಡೆಸಿದ ನಂತರ ಈ ಘೋಷಣೆ ಹೊರಬಿದ್ದಿದೆ.

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಪವಾರ್ ಈ ಹೆಜ್ಜೆ ಇಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net