ರಾಜ್ಯ ಸರ್ಕಾರಿ ನೌಕರರೇ ಸೋಮವಾರದಿಂದ ಆಫೀಸಿಗೆ ಹೊರಡಲು ರೆಡಿಯಾಗಿ...

State Govemt 2 May 20
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ನೌಕರರಿಗೆ ರಜೆ ನೀಡಲಾಗಿತ್ತು. ಅದೀಗ ಅಂತ್ಯವಾಗುವ ಅವಧಿ ಸಮೀಪಿಸಿದೆ.

ಸೋಮವಾರದಿಂದ ಎಲ್ಲ ಜಿಲ್ಲೆಗಳಲ್ಲಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶೇ. 100 ರಷ್ಟು ಗ್ರೂಪ್ ಎ,ಬಿ,ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಬರುವ ಕಚೇರಿಗಳಿಗೆ ಮಾತ್ರ ಅನ್ವಯವಾಗುತ್ತದೆ.

ಉಳಿದಂತೆ ಕೆಂಪು ವಲಯದಲ್ಲಿರುವ ಜಿಲ್ಲೆಗಳಲ್ಲಿ ಆಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ. 100ರಷ್ಟು ಗ್ರೂಪ್ ಎ,ಬಿ,ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು. ಉಳಿದ ಇಲಾಖೆಗಳಲ್ಲಿನ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು ಮತ್ತು ಸಿ, ಡಿ ವೃಂದದ ಶೇ. 33ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ‌್ಯದರ್ಶಿ ತ.ಮ. ವಿಜಯಭಾಸ್ಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net