More

    ಎನ್‌ಡಿಎ ೫೦೦ ಸೀಟು ಗೆಲ್ಲಲಿದೆ

    ಚಿಕ್ಕಮಗಳೂರು: ಪ್ರಸ್ತುತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ೩೭೦ ಹಾಗೂ ಎನ್‌ಡಿಎ ಸೇರಿ ೫೦೦ ಸೀಟು ಗೆದ್ದು ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಬಿಜೆಪಿ ರಾಜ್ಯ ವಕ್ತಾರ ಮೋಹನ್ ವಿಶ್ವ ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳವಾರ ರಾಜ್ಯಕ್ಕೆ ಗೃಹಸಚಿವ ಅಮಿತಾ ಶಾ ಬರಲಿದ್ದಾರೆ. ದೊಡ್ಡಮಟ್ಟದ ಚುನಾವಣಾ ರ‍್ಯಾಲಿಗಳು ನಡೆಯಲಿವೆ. ಕಳೆದ ೧೦ ವರ್ಷದ ಬಿಜೆಪಿ ಆಡಳಿತದ ಅವಧಿಯಲ್ಲಿ ೬೦ ವರ್ಷದಿಂದ ಪರಿಹಾರವಾಗದ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಪ್ರಧಾನಿ ಮೋದಿ ದೇಶವನ್ನು ೫ನೇ ಆರ್ಥಿಕತೆಗೆ ತಂದಿದ್ದಾರೆ. ೨೦೨೭ ರ ಹೊತ್ತಿಗೆ ದೇಶವನ್ನು ೩ನೇ ಆರ್ಥಿಕತೆಗೆ ತೆಗೆದುಕೊಂಡು ಹೋಗಲಿದ್ದಾರೆ. ದೇಶ ವಿಶ್ವಗುರು ಆಗಲಿದೆ ಎಂದು ಬಣ್ಣಿಸಿದರು.
    ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ, ಮಹಿಳಾ ಶೌಚವಗೃಹ ನಿರ್ಮಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪ್ರಧಾನಿ ಮೋದಿ ಅವರು ೪ ಸಮುದಾಯಗಳನ್ನು ಗುರಿಯಾಗಿಸಿಕೊಂಡು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬಿಜೆಪಿ ಅದಾನಿ, ಅಂಬಾನಿಗಳAತಹ ಉದ್ಯಮಿಗಳ ಪರ ಎಂದು ಕಾಂಗ್ರೆಸ್ ಟೀಕಿಸುತ್ತದೆ. ಆದರೆ ಇಂಥ ಬಡವರ ಪರವಾದ ಯೋಜನೆಗಳು ಕಾಂಗ್ರೆಸ್ ಕಣ್ಣಿಗೆ ಕಾಣಿಸುವುದೇ ಇಲ್ಲ ಎಂದು ಆರೋಪಿಸಿದರು.
    ಇಂಡಿಯಾ ಒಕ್ಕೂಟಕ್ಕೆ ಈವರೆಗೆ ತನ್ನ ನಾಯಕ ಯಾರು ಎಂದು ಗುರುತು ಮಾಡಲಾಗಿಲ್ಲ. ಇಂಡಿಯಾ ಒಕ್ಕೂಟದ ಕೆಲ ನಾಯಕರು ತಮ್ಮ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ತಮ್ಮದೇ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿAದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಬಿಜೆಪಿ ಮುಖಂಡ ಸಿ.ಎಚ್ ಲೋಕೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಬಾಂಡ್ ಕೊಡಿ ಎಂದು ಪೊಲೀಸರು ಕೇಳುತ್ತಾರೆ. ಇಂಥ ದಮನಕಾರಿ ನೀತಿಯನ್ನು ಕೂಡಲೇ ಕಾಂಗ್ರೆಸ್ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಮಧುಕುಮಾರ್ ರಾಜ್ ಅರಸ್, ಮಹೇಶ್ ಒಡೆಯರ್, ಎಚ್.ಎಸ್.ಪುಟ್ಟಸ್ವಾಮಿ, ವಿಜೇಂದ್ರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts