More

    ಬಿಹಾರದಲ್ಲಿ ಎನ್​ಡಿಎ ಸೀಟು ಹಂಚಿಕೆ ಫೈನಲ್​: ಬಿಜೆಪಿ 17, ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧೆ

    ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಜೊತೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.

    ಇದನ್ನೂ ಓದಿ: ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!

    ಸೋಮವಾರ (ಫೆ.18) ರಂದು ಪ್ರಕಟವಾದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

    ಬಿಹಾರದ ಎನ್‌ಡಿಎ ಮೈತ್ರಿಕೂಟದ ಸದಸ್ಯರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಸೀಟು ಹಂಚಿಕೆ ಸುದ್ದಿಯನ್ನು ತಿಳಿಸಿದರು.

    ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ ಮತ್ತು ಉಪೇಂದ್ರ ಕುಶ್ವಾಹಾ ಅವರ ಆರ್‌ಎಲ್‌ಎಂ ತಲಾ ಒಂದು ಸ್ಥಾನದಲ್ಲಿ ಕಣಕ್ಕಿಳಿಯಲಿದೆ.

    ಲೋಕಸಭೆ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಬಿಹಾರದಲ್ಲಿ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

    ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts