

ವೈಜಾಗ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಸಖತ್ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.
ಗಗನಸಖಿಯರು ಹಾಗೂ ಸಂಸ್ಥೆಯಲ್ಲಿ ವಿವಿಧ ಕೆಲಸ ಮಾಡುವ ಸಿಬ್ಬಂದಿಯೆಲ್ಲ ಸೇರಿ ಬುಟ್ಟ ಬೊಮ್ಮಾ...ಹಾಡಿಗೆ ಚೆಂದನೆಯ ಸ್ಟೆಪ್ ಹಾಕಿದ್ದಾರೆ.
ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ ಚಿತ್ರದ ಬುಟ್ಟ ಬೊಮ್ಮಾ ಹಾಡು ಈಗಾಗಲೇ ಫೇಮಸ್ ಆಗಿದೆ. ಈಗ ಇದೇ ಹಾಡಿಗೆ ಇಂಡಿಗೋ ಸಿಬ್ಬಂದಿ ಸ್ಟೆಪ್ ಹಾಕಿದ್ದು ನೋಡಿ ನೆಟ್ಟಿಗರು ಫುಲ್ ಖುಷಿಯಾಗಿದ್ದಾರೆ. ಇವರೆಲ್ಲ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ನೃತ್ಯ ಮಾಡಿದ್ದಾರೆ. ಇದನ್ನೂ ಓದಿ: ಕೊವಿಡ್-19 ಸೋಂಕಿತ ಯುವತಿಯ ಮೇಲೆ ಒಂದೇ ರಾತ್ರಿಯಲ್ಲಿ 2 ಬಾರಿ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯ
ಈ ಹಾಡಿಗೆ ಅದೆಷ್ಟೋ ಜನ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಡ್ಯಾನ್ಸ್ ಮಾಡಿದ ಹಲವು ವಿಡಿಯೋಗಳು ಇಗಾಗಲೇ ವೈರಲ್ ಆಗಿವೆ. ಅದರಲ್ಲೂ ಆಸ್ಟ್ರೇಲಿಯಾದ ಕ್ರಿಕೆಟರ್ ಡೇವಿಡ್ ವಾರ್ನರ್ ಅವರು ತಮ್ಮ ಪತ್ನಿಯೊಂದಿಗೆ ಈ ಹಾಡಿಗೆ ನೃತ್ಯ ಮಾಡಿದ್ದರು. ಅದನ್ನು ನೋಡಿದ ನೆಟ್ಟಿಗರು ಫುಲ್ ಫಿದಾ ಆಗಿದ್ದರು.
ಇದೀಗ ಇಂಡಿಗೋ ಸಿಬ್ಬಂದಿ ಡ್ಯಾನ್ಸ್ ಮಾಡಿದ ವಿಡಿಯೋವನ್ನು ಅನೇಕರು ಶೇರ್ ಮಾಡಿಕೊಂಡಿದ್ದಾರೆ. ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು ಇಂಡಿಗೋ ಸಿಬ್ಬಂದಿಯ ಎನರ್ಜಿಗೆ ಶಬ್ಬಾಸ್ಗಿರಿ ಕೊಟ್ಟಿದ್ದರೆ, ಇನ್ನೂ ಕೆಲವರು ಹಾಡಿನ ಪ್ರಸಿದ್ಧತೆಯ ಬಗ್ಗೆ ಮಾತನಾಡಿದ್ದಾರೆ.(ಏಜೆನ್ಸೀಸ್)