18 C
Bangalore
Friday, December 6, 2019

8000 ಅತಿಥಿಗಳು ಪಾಲ್ಗೊಳ್ಳಲಿದ್ದಾರೆ ಮೋದಿ ಪದಗ್ರಹಣ ಸಮಾರಂಭಕ್ಕೆ: ಸತ್ಕಾರಕ್ಕೆ ಚಹಾ, ಔತಣಕೂಟಕ್ಕೆ ದಾಲ್​ ರೈಸೀನಾ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಬಂದಾಗಿದೆ. ನಾಳೆ ನರೇಂದ್ರ ಮೋದಿಯವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು ವಿದೇಶಗಳ ಗಣ್ಯರೂ, ದೇಶದ ಪ್ರಮುಖರೂ ಪಾಲ್ಗೊಳ್ಳುವುದು ಖಚಿತವಾಗಿದೆ.

ನಾಳೆ ಸಂಜೆ 7ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸುಮಾರು 8000 ಜನ ಅತಿಥಿಗಳು ಪಾಲ್ಗೊಳ್ಳಲಿದ್ದು ರಾಷ್ಟ್ರಪತಿ ಭವನದ ಎದುರು ನಡೆದ ಅತಿದೊಡ್ಡ ಸಮಾರಂಭ ಎನಿಸಿಕೊಳ್ಳಲಿದೆ.

ಸಮಾರಂಭಕ್ಕೆ ಆಗಮಿಸುವ ಅತಿಥಿಗಳಿಗೆ ಸ್ವಾದಿಷ್ಟಭರಿತ ಚಹಾದ ಜತೆ ಸ್ಕೋನ್​ (ಕೇಕ್​, ಬ್ರೆಡ್​ನಿಂದ ಮಾಡಿದ ರುಚಿಕರ ತ್ವರಿತ ತಿನಿಸು)ಗಳನ್ನು ನೀಡಿ ಆದರಿಸಲಾಗುವುದು. ಬಿಮ್​ಸ್ಟೆಕ್​ ದೇಶಗಳಿಂದ ಆಗಮಿಸುತ್ತಿರುವ ಮುಖಂಡರು, ಗಣ್ಯರಿಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರೂ ಕೂಡ ವೈಯಕ್ತಿಕವಾಗಿ ಔತಣಕೂಟ ಏರ್ಪಿಡಿಸಲಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿಯವರ ಮಾಧ್ಯಮ ಕಾರ್ಯದರ್ಶಿ ಅಶೋಕ್​ ಮಲಿಕ್​ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ಭವನದ ಎದುರು ಹಿಂದೆಂದೂ ನಡೆಯದಷ್ಟು ದೊಡ್ಡ ಪ್ರಮಾಣದಲ್ಲಿ ಈ ಬಾರಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭ ಜರುಗಲಿದೆ ಎಂದು ಅಶೋಕ್​ ತಿಳಿಸಿದ್ದಾರೆ.

ಜಗತ್ತಿನ ವಿವಿಧ ರಾಷ್ಟ್ರಗಳ ಗಣ್ಯರಲ್ಲದೆ, ದೇಶದ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷಗಳ ಮುಖಂಡರು, ಪ್ರತಿಪಕ್ಷಗಳ ನಾಯಕರು, ರಾಯಭಾರಿಗಳು, ಬೇರೆಬೇರೆ ಕ್ಷೇತ್ರದ ಸಿಲಿಬ್ರಿಟಿಗಳು ಕೂಡ ಭಾಗವಹಿಸಲಿದ್ದಾರೆ. ಸುಮಾರು 100 ಜನ ಅನಿವಾಸಿ ಭಾರತೀಯರು ಕೂಡ ದೆಹಲಿಗೆ ಆಗಮಿಸುತ್ತಿದ್ದಾರೆ.

ಟೀ ಜತೆಗೆ ಸ್ನಾಕ್ಸ್​, ಸಮೋಸಾ, ಪನೀರ್​ ತಿನಿಸುಗಳು, ಸಿಹಿತಿಂಡಿಗಳು ಇರಲಿವೆ. ಹಾಗೇ ರಾಷ್ಟ್ರಪತಿಯವರು ವಿದೇಶಿ ಅಧ್ಯಕ್ಷರು, ಪ್ರಧಾನಿಗಳಿಗಾಗಿ ಏರ್ಪಡಿಸುತ್ತಿರುವ ಔತಣಕೂಟದಲ್ಲಿ ವಿಶೇಷವಾಗಿ ದಾಲ್​ ರೈಸೀನಾ ಖಾದ್ಯ ಇರಲಿದೆ. ಇದೊಂದು ರಾಷ್ಟ್ರಪತಿ ಭವನದ ಭೋಜನದಲ್ಲಿರುವ ಮುಖ್ಯ ಪದಾರ್ಥವಾಗಿದ್ದು ತಯಾರಿಸಲೇ 48 ಗಂಟೆಗಳು ಬೇಕು. ಇದರೊಟ್ಟಿಗೆ ಹಲವು ರೀತಿಯ ರುಚಿಕರ ತಿನಿಸುಗಳು ಇರಲಿವೆ ಎಂದು ಮಲಿಕ್​ ತಿಳಿಸಿದ್ದಾರೆ.

ಭೋಜನದಲ್ಲಿ ವೆಜಿಟೇರಿಯನ್​ ಮತ್ತು ನಾನ್​ ವೆಜಿಟೇರಿಯನ್​ ತಿನಿಸುಗಳು ಇರುತ್ತವೆ. ಸೂಪ್​, ಮೀನು, ಚಿಕನ್​, ತರಕಾರಿಗಳ ಹಲವು ಪ್ರಕಾರದ ಖಾದ್ಯಗಳನ್ನು ತಯಾರಿಸಲಾಗುತ್ತಿದೆ. ಅದರಲ್ಲೂ ಮಾ ಕೀ ದಾಲ್​ ಎಂದೇ ಕರೆಯಲ್ಪಡುವ ದಾಲ್​ ರೈಸೀನಾವನ್ನು ಮೇ 28ರಿಂದಲೇ ತಯಾರಿಸಲು ಪ್ರಾರಂಭಿಸಿದ್ದು ನಾಳೆ ಸಂಜೆಯಷ್ಟರಲ್ಲಿ ಸಿದ್ಧವಾಗುತ್ತದೆ ಎಂದು ಮಲಿಕ್​ ಹೇಳಿದ್ದಾರೆ. ಭೋಜನಕೂಟದಲ್ಲಿ ಪ್ರಧಾನಿ ಮೋದಿಯವರು ತಮ್ಮ ಕೆಲವು ಅಧಿಕಾರಿಗಳ ಜತೆ ಭಾಗವಹಿಸಲಿದ್ದಾರೆ.

2014ರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 5000 ಅತಿಥಿಗಳು ಸೇರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...