ಪೊಲೀಸ್ ತರಬೇತಿ ಶಾಲೆಗೆ ಅಗತ್ಯ ಸೌಕರ್ಯ

ಕಡೂರು: ಪೊಲೀಸ್ ತರಬೇತಿ ಶಾಲೆಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿ ರಾಜ್ಯದಲ್ಲಿಯೇ ಅತ್ಯುತ್ತಮ ತರಬೇತಿ ಶಾಲೆ ಎಂಬ ಹೆಸರು ಪಡೆಯುವಂತಾಗಬೇಕೆಂಬ ಚಿಂತನೆ ಹೊಂದಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಗೆದ್ಲೇಹಳ್ಳಿ ಸಮೀಪದ ಪೊಲೀಸ್ ತರಬೇತಿ ಕೇಂದ್ರದಲ್ಲಿ 3.64 ಕೋಟಿ ರೂ. ವೆಚ್ಚದಲ್ಲಿ ಭಾನುವಾರ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ನಿಟ್ಟಿನಲ್ಲಿ ಸುಸಜ್ಜಿತ ವ್ಯವಸ್ಥೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ತರಬೇತಿ ಕೇಂದ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು. ಕ್ಷೇತ್ರವೂ ಅಭಿವೃದ್ಧಿಗೆ ಪೂರಕವಾಗಿ ಶೈಕ್ಷಣಿಕ ಮತ್ತು ವಾಣಿಜ್ಯ ಕೇಂದ್ರಗಳ ಬೆಳವಣಿಗೆಯಿಂದ ಹಿರಿಮೆ ಹೆಚ್ಚಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಪೊಲೀಸ್ ತರಬೇತಿ ಶಾಲೆಯಲ್ಲಿ ಪ್ರತಿವಷರ್ 500ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆಯುತ್ತಾರೆ. ಅವರಿಗೆ ಯಾವ ಕೊರತೆಯೂ ಆಗದಂತೆ ಎಲ್ಲ ಸೌಕರ್ಯಗಳೂ ದೊರೆಯಬೇಕು. ಈ ನಿಟ್ಟಿನಲ್ಲಿ ನನ್ನ ಸಹಕಾರ ಸದಾ ಇರುತ್ತದೆ ಎಂದರು.
ತರಬೇತಿ ಶಾಲೆ ಪ್ರಾಚಾರ್ಯ ಮತ್ತು ಅಧೀಕ್ಷಕ ಎನ್.ಶ್ರೀನಿವಾಸ್ ಮಾತನಾಡಿ, ಶಾಲೆಗೆ ಸುಸಜ್ಜಿತ ಆಡಿಟೋರಿಯಂ ಅಗತ್ಯವಾಗಿದೆ. ಶಾಸಕರು ತರಬೇತಿ ಶಾಲೆಗೆ ಮತ್ತಷ್ಟು ಮೆರುಗು ತಂದುಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಪಾಲಕ ಇಂಜಿನಿಯರ್ ಪದ್ಮಜಾ, ಗುತ್ತಿಗೆದಾರ ರವಿಶಂಕರ್, ಕರ್ನಾಟಕ ಪೊಲೀಸ್ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಎಇಇ ಲೋಕೇಶ್, ಮಂಜುನಾಥ್, ತರಬೇತಿ ಶಾಲೆಯ ಸಿಬ್ಬಂದಿ ಇದ್ದರು.

Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…