More

    ಖೈದಿಗಳ ಜೀವನ ಸುಧಾರಣೆಗೆ ಅಗತ್ಯ ಕ್ರಮ!

    ಬೆಂಗಳೂರು: ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದ್ದು, ಖೈದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಖೈದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿದ್ದು, ಕಾರಾಗೃಹಗಳ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು.

    ವಿಜಯಪುರ, ಬೀದರ್, ಮಂಗಳೂರು ಮತ್ತು ಬೆಂಗಳೂರು ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಗರಿಷ್ಠ ಭದ್ರತಾ ಕಾರಾಗೃಹ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಕಾರಾಗೃಹ ಸಾಮರ್ಥ್ಯ 4,000 ರಷ್ಟು ಹೆಚ್ಚಾಗುತ್ತಿದ್ದು, ರಾಜ್ಯದ ಉಳಿದ ಕಾರಾಗೃಹಗಳಲ್ಲಿಯೂ 1,465 ಖೈದಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

    ಅಲ್ಲದೆ, ಪ್ರವಾಸೋದ್ಯಮವನ್ನು ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್​ ಒಂದನ್ನು ಈ ವರ್ಷದಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಜತೆಗೆ ಸಂತ ಸೇವಾ ಲಾಲ್​ ಅವವರ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ಸೌಲಭ್ಯವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದರು.

    ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ, ಮೂಲಸೌಲಭ್ಯ ನೀಡಲಾಗುವುದು. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ನಿರ್ಮಿಸಲಾದ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಬಜೆಟ್​​ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts