More

    ಜಾಗೃತಿ ಜಾಥಾ ಸ್ವಾಗತಕ್ಕೆ ಅಗತ್ಯ ಸಿದ್ಧತೆ

    ಕಡೂರು: ಪಟ್ಟಣಕ್ಕೆ ೆ.18ರಂದು ಆಗಮಿಸುವ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರವನ್ನು ಹಬ್ಬದ ರೀತಿಯಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್ ತಿಳಿಸಿದರು.
    ಪುರಸಭೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಾಗೃತಿ ಜಾಥಾ ತಯಾರಿ ಸಭೆಯಲ್ಲಿ ಮಾತನಾಡಿ, ಪಟ್ಟಣದ ಎಲ್ಲ ವಾರ್ಡ್‌ಗಳ ಜನಪ್ರತಿನಿಧಿಗಳು, ಸರ್ಕಾರಿ ನೌಕರರು, ವಿವಿಧ ಇಲಾಖೆ ಅಧಿಕಾರಿಗಳು ನಾಗರಿಕರಿಂದ ಸ್ವಾಗತಿಸಲಾಗುವುದು. ಹಬ್ಬದ ಸಂಭ್ರಮದಂತೆ ರಥಯಾತ್ರೆಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಬೀಳ್ಕೊಡಲಾಗುವುದು. ಇದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದರು.
    ಪುರಸಭೆ ಸದಸ್ಯ ಭಂಡಾರಿ ಶ್ರೀನಿವಾಸ್ ಮಾತನಾಡಿ, ದೇಶದ ಸಂವಿಧಾನ ಎಲ್ಲ ನಾಗರಿಕರಿಗೂ ಹಾಗೂ ಸಮಾಜಗಳಿಗೂ ಅನ್ವಯಿಸುತ್ತದೆ. ೆ.18ರಂದು ಪಟ್ಟಣಕ್ಕೆ ಆಗಮಿಸುವ ಸಂವಿಧಾನ ಜಾಗೃತಿ ಜಾಥಾವನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಿ ವಿವಿಧ ಕಲಾತಂಡಗಳಿಂದ ಮೆರುಗು ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ ಎಂದು ಹೇಳಿದರು.
    ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು. ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಮೂಡಿಸಲು ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ. ಪಟ್ಟಣದ ನಾಗರಿಕರು ಜಾಗೃತಿ ರಥಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
    ಪುರಸಭೆ ಸದಸ್ಯರಾದ ಈರಳ್ಳಿ ರಮೇಶ್, ತೋಟದಮನೆ ಮೋಹನ್‌ಕುಮಾರ್, ಮಹಮದ್ ಯಾಸೀನ್, ಮುಖಂಡರಾದ ಶಂಕರ್, ಮಂಜಪ್ಪ, ಮೈಲಾರಪ್ಪ, ಚಿನ್ನರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts