More

    ಅಗತ್ಯ ವಸ್ತುಗಳಿಗಾಗಿ ಆತಂಕ ಬೇಡ

    ಚಿಕ್ಕೋಡಿ: ಕರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಲಾಕ್‌ಡೌನ್ ಆದೇಶವನ್ನು ಪ್ರತಿಯೊಬ್ಬರೂ ತಪ್ಪದೇ ಪಾಲಿಸಬೇಕು. ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಕೋರಿದ್ದಾರೆ.

    ಬುಧವಾರ ತಾಲೂಕಿನ ಯಡೂರ, ಕಲ್ಲೋಳ, ಚಂದೂರ, ಮಾಂಜರಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕರೊನಾ ವೈರಸ್ ನಿಯಂತ್ರಣ ಕುರಿತು ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಮನೆಯಲ್ಲಿ ಇರುವುದರಿಂದ ಅಗತ್ಯ ವಸ್ತುಗಳು ಸಿಗುವುದಿಲ್ಲ ಎಂದು ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಸರ್ಕಾರ ಈ ಕುರಿತು ಅಗತ್ಯ ವ್ಯವಸ್ಥೆ ಮಾಡಿದೆ. ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಹಾಗೂ ಮನೆಯಿಂದ ಹೊರಗೆ ಹೋದಾಗ ತಪ್ಪದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಹಿತಿ ಸಂಗ್ರಹಿಸಲು ಆಗಮಿಸುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಕರಿಸಿ ಅವರಿಗೆ ಮಾಹಿತಿ ನೀಡಿ ಎಂದು ವಿನಂತಿಸಿದರು. ಸಿ.ಬಿ. ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಮಾಜಿ ಉಪಾಧ್ಯಕ್ಷ ಅಜೀತ ದೇಸಾಯಿ, ತಹಸೀಲ್ದಾರ್ ಸುಭಾಷ ಸಂಪಗಾವಿ, ಅಂಕಲಿ ಪಿಎಸ್‌ಐ ಎಂ.ಎಂ. ತಹಸೀಲ್ದಾರ್, ಸಿಡಿಪಿಒ ದೀಪಾ ಕಾಳೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts