16 C
Bangalore
Saturday, December 7, 2019

ಗಂಗೊಳ್ಳಿಗೆ ಬೇಕು ಕಿರು ಬಂದರು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಗಂಗೊಳ್ಳಿ: ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆ ನಡೆಯುವ ಪ್ರಮುಖ ಪ್ರದೇಶಗಳಲ್ಲಿ ಒಂದಾಗಿರುವ ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್‌ನಲ್ಲಿ ಅನೇಕ ವರ್ಷಗಳಿಂದ ನಾಡದೋಣಿ ನಿಲುಗಡೆಗೆ ಅನುಕೂಲವಾಗುವಂತೆ ಕಿರು ಬಂದರು ನಿರ್ಮಾಣ ಮಾಡಬೇಕೆಂಬ ಬೇಡಿಕೆಯಿದ್ದರೂ, ಈವರೆಗೆ ಮೀನುಗಾರರ ಬೇಡಿಕೆಗೆ ಸರ್ಕಾರದಿಂದ ಮನ್ನಣೆ ಸಿಕ್ಕಿಲ್ಲ.
ಗಂಗೊಳ್ಳಿಯಲ್ಲಿ ನಾಡದೋಣಿ ಹಾಗೂ ಯಾಂತ್ರೀಕೃತ ಎರಡೂ ವಿಧದ ಮೀನುಗಾರಿಕೆ ನಡೆಯುತ್ತಿದ್ದು, ಬೇಸಿಗೆಯಲ್ಲಿ ನಾಡದೋಣಿಗಳನ್ನು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ನಿಲುಗಡೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಲೈಟ್‌ಹೌಸ್ ಬಳಿ ನಾಡದೋಣಿ ಮೀನುಗಾರಿಕೆ ನಡೆಯುತ್ತಿರುವುದರಿಂದ ನೂರಾರು ದೋಣಿಗಳು ಈ ಭಾಗದಲ್ಲಿ ತಂಗುತ್ತವೆ. ಆದರೆ ದೋಣಿಗಳು ತಂಗಲು ಮತ್ತು ಮೀನುಗಾರಿಕೆ ನಡೆಸಲು ಮೂಲಸೌಲಭ್ಯದ ಕೊರತೆ ಎದ್ದು ಕಾಣುತ್ತಿದೆ.

600 ನಾಡದೋಣಿಗಳು: ಗಂಗೊಳ್ಳಿಯಲ್ಲಿ 600 ನಾಡದೋಣಿಗಳಿದ್ದು, ಒಂದು ಜೋಡು (3 ದೋಣಿ)ನಲ್ಲಿ ತಲಾ 10 ಮಂದಿಯಂತೆ 30 ಜನ ಇರುತ್ತಾರೆ. ಇಲ್ಲಿ ಸರಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ನಾಡದೋಣಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

 ಜಾಗದ ಸಮಸ್ಯೆ: ಗಂಗೊಳ್ಳಿ ಬಂದರಿನಲ್ಲಿ ಪರ್ಸೀನ್, ಟ್ರಾಲ್‌ಬೋಟ್‌ಗಳು, ಗಿಲ್‌ನೆಟ್, ಪಾತಿ ಹಾಗೂ ನಾಡದೋಣಿಗಳೆಲ್ಲ ಸೇರಿ ಸುಮಾರು 3,700 ಕ್ಕೂ ಹೆಚ್ಚು ಬೋಟು ಹಾಗೂ ನಾಡದೋಣಿಗಳಿವೆ. ಈಗ ಗಂಗೊಳ್ಳಿ ಬಂದರಿನಲ್ಲಿರುವ ಜೆಟ್ಟಿ ಕುಸಿದಿರುವುದರಿಂದ ಬಂದರು ಜೆಟ್ಟಿಯಲ್ಲಿ ದೋಣಿಗಳನ್ನು ನಿಲ್ಲಿಸಲು ಜಾಗದ ಸಮಸ್ಯೆ ಎದುರಾಗಿದೆ. ಆದ್ದರಿಂದ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಪ್ರಶಸ್ತವಾದ ಲೈಟ್‌ಹೌಸ್ ಪ್ರದೇಶದಲ್ಲಿ ಕಿರು ಬಂದರು ಅಥವಾ ಜೆಟ್ಟಿ ನಿರ್ಮಾಣ ಮಾಡಬೇಕು ಎಂಬುದು ಮೀನುಗಾರರ ಬೇಡಿಕೆ. ಮೀನು ಸಾಗಾಟದ ಹಾಗೂ ಇನ್ನಿತರ ವಾಹನಗಳು ಕಡಲ ತೀರದ ಸನಿಹಕ್ಕೆ ಸಾಗಲು ಮಣ್ಣಿನ ರಸ್ತೆ ನಿರ್ಮಿಸಲಾಗಿದ್ದು, ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿ. ಹೀಗಾಗಿ ವಾಹನಗಳು ಅನತಿ ದೂರದಲ್ಲಿ ನಿಲುಗಡೆ ಮಾಡಬೇಕಾದ ಪರಿಸ್ಥಿತಿ ಇದೆ. ದೋಣಿಗಳಿಂದ ಮೀನುಗಳನ್ನು ಹೊತ್ತು ಲಾರಿಗಳಲ್ಲಿ ತುಂಬಿಸಲು ಬಹಳ ಕಷ್ಟವಾಗುತ್ತಿದ್ದು, ಮೀನುಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿ ಲೈಟ್‌ಹೌಸ್ ಪ್ರದೇಶದಲ್ಲಿ ಕಿರು ಬಂದರು ಹಾಗೂ ಜೆಟ್ಟಿ ನಿರ್ಮಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.

ಗಂಗೊಳ್ಳಿ ಲೈಟ್‌ಹೌಸ್ ಬಳಿ ನಾಡದೋಣಿಗಳಿಗೆ ಅನುಕೂಲವಾಗುವಂತೆ ಜೆಟ್ಟಿ ನಿರ್ಮಿಸಲು 2-3 ವರ್ಷದ ಹಿಂದೆ ಆಗಿನ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದೆವು. ಈಗಿನ ಮೀನುಗಾರಿಕಾ ಸಚಿವರು ಇಲ್ಲಿಗೆ ಭೇಟಿ ಕೊಟ್ಟಾಗಲೂ ಅವರ ಗಮನಕ್ಕೂ ತರಲಾಗಿದೆ. ಆದರೆ ಈ ಬಗ್ಗೆ ಯಾವುದೇ ಹೊಸ ಬೆಳವಣಿಗೆಗಳು ಕಾಣುತ್ತಿಲ್ಲ. ಇಲ್ಲಿ ಜೆಟ್ಟಿ ಆದರೆ ಮಳೆಗಾಲದಲ್ಲಿ ನಾಡದೋಣಿ ಮೀನುಗಾರರಿಗೆ ಪ್ರಯೋಜನವಾಗಲಿದೆ.
ಮಂಜು ಬಿಲ್ಲವ ಅಧ್ಯಕ್ಷರು, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ

ಗಂಗೊಳ್ಳಿ ನಾಡದೋಣಿ ಮೀನುಗಾರರ ಬೇಡಿಕೆ ಬಗ್ಗೆ ಪರಿಶೀಲಿಸಿ ಜೆಟ್ಟಿ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅದರೊಂದಿಗೆ ಗಂಗೊಳ್ಳಿ ಬಂದರಿನ ಅಭಿವೃದ್ಧಿ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಗಂಗೊಳ್ಳಿ ಹಾಗೂ ಕುಂದಾಪುರವನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದ್ದೇನೆ. ಗಂಗೊಳ್ಳಿ ಲೈಟ್‌ಹೌಸ್ ಬಳಿ ನಾಡದೋಣಿಗಳಿಗೆ ಅನುಕೂಲವಾಗುವಂತೆ ಜೆಟ್ಟಿ ನಿರ್ಮಿಸಲು ಪ್ರಯತ್ನ ನಡೆಯುತ್ತಿದೆ.
ಬಿ.ಎಂ.ಸುಕುಮಾರ ಶೆಟ್ಟಿ ಬೈಂದೂರು ಶಾಸಕರು

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...