

ಕೋಟ: ಗಿಡ ನೆಡುವ ಬಗ್ಗೆ ನಿರ್ಲಕ್ಷ್ಯ ಸಲ್ಲ. ಪ್ರತಿಯೊಬ್ಬರು ಪರಿಸರಸ್ನೇಹಿ ವಾತಾವರಣ ನಿರ್ಮಿಸಿ ಎಂದು ಕೋಟತಟ್ಟು ಪಂಚಾಯಿತಿ ಸದಸ್ಯೆ ವಿದ್ಯಾ ಸಾಲಿಯಾನ್ ಕರೆ ಕೊಟ್ಟರು.
ಕೋಟತಟ್ಟು ಪಡುಕರೆಯಲ್ಲಿ ಭಾನುವಾರ ಕೋಟದ ಪಂಚವರ್ಣ ಯುವಕ, ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ರೋಟರಿ ಕ್ಲಬ್ ಕೋಟ ಸಿಟಿ ಇವರ ಸಹಭಾಗಿತ್ವದಲ್ಲಿ ನಡೆದ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕೋಟತಟ್ಟು ಪಂಚಾಯಿತಿ ವಾಜಿ ಸದಸ್ಯೆ ಸುಜಾತ ಉದಯ್, ಉದ್ಯಮಿ ಕೇಶವ ಪುತ್ರನ್, ಗೀತಾನಂದ ಫೌಂಡೇಶನ್ ಸವಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ರವೀಂದ್ರನಾಥ ಹಂದೆ, ಕೋಟತಟ್ಟು ಪಂಚಾಯಿತಿ ವಾಜಿ ಅಧ್ಯಕ್ಷೆ ವಿಶ್ವಪ್ರಕಾಶನಿ ಹಂದೆ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಬೆಳಗಾವಿ ಸ್ವಾಗತಿಸಿದರು. ಅಜಿತ್ ಆಚಾರ್ ನಿರೂಪಿಸಿದರು. ರವೀಂದ್ರ ಕೋಟ ಸಂಯೋಜಿಸಿದರು.