ಕ್ರೀಡಾ ಮೀಸಲಾತಿ ಸದುಪಯೋಗ ಅಗತ್ಯ

blank

ಶಿರ್ವ: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡಾಪಟುಗಳೂ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿ ಮೆರೆಯುವುದು ಮುಖ್ಯ. ಇತ್ತೀಚೆಗೆ ಸರ್ಕಾರ ಕ್ರೀಡೆಗೆ ಹೆಚ್ಚಿನ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನ್ ಸನಿಲ್ ಹೇಳಿದರು.

ಪಡುಬೆಳ್ಳೆ ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯ ಶಿವಾಜಿ ಎಸ್.ಸುವರ್ಣ ಧ್ವಜಾರೋಹಣಗೈದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಡಳಿತ ಮಂಡಳಿ ಸದಸ್ಯರಾದ ಗೀತಾ ವಾಗ್ಲೆ ಬಂಟಕಲ್ಲು, ಸುರೇಶ ಪೂಜಾರಿ, ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷೆ ಭವ್ಯಾ ಆರ್. ಸುವರ್ಣ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ಸಾಲಿಯಾನ್ ಸ್ವಾಗತಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಉಷಾ ಎಸ್.ವಂದಿಸಿದರು. ಶಿಕ್ಷಕಿ ರಿನುಷಾ, ದೀಕ್ಷಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ದೇವಾಡಿಗ, ಸ್ವಾತಿ ಕ್ರೀಡಾಕೂಟ ಸಂಯೋಜಿಸಿದ್ದರು.

ಆಳ್ವಾಸ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಗೋಳಿಯಂಗಡಿಯಲ್ಲಿ ಸಂವಿಧಾನ ದಿನಾಚರಣೆ

 

Share This Article

ಸನ್‌ಸ್ಕ್ರೀನ್, ಸೀರಮ್‌ಗಳನ್ನು ಬಳಸುತ್ತೀರಾ? ಹಾಗಿದ್ರೆ ಕ್ಯಾನ್ಸರ್​​ ಬರಬಹುದು ಎಚ್ಚರ! Glow Skin

Glow Skin | ನಮ್ಮ ಸ್ಕಿನ್​ ಗ್ಲೋ ಆಗಿ ಕಾಣಬೇಕೆಂದು ಮಹಿಳೆಯರು ಮಾಡುವ ಪ್ರಯತ್ನ ಒಂದೆರಡಲ್ಲ.…

ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಕಾಲಿನಿಂದ ತುಳಿಯಬೇಡಿ!  ನೀವು ಖಂಡಿತವಾಗಿಯೂ ಆರ್ಥಿಕ ತೊಂದರೆಗೆ ಸಿಲುಕುವಿರಿ.. Vasthu Tips

Vasthu Tips: ಹಿರಿಯರು ಹೇಳಿದ್ದನ್ನು  ಅನೇಕ ಜನರು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ನಾವು ಕೆಲವು ವಸ್ತುಗಳನ್ನು ದೇವರು…

ಈ ಬೇಸಿಗೆಯಲ್ಲಿ ನಿಮ್ಮ ಅಡುಗೆಮನೆಯಲ್ಲಿ ಇವು ಇರಲೇಬೇಕು! kitchen

kitchen: ಬೇಸಿಗೆಯಲ್ಲಿ, ಬಿಸಿಲು ತುಂಬಾ ಇರುತ್ತದೆ,  ಬಿಸಿಯಾದ, ಕೊಳಕಾದ ಅಡುಗೆಮನೆಯು ಕೀಟಗಳು ಮತ್ತು ಸೂಕ್ಷ್ಮಜೀವಿಗಳನ್ನು ಆಹ್ವಾನಿಸಬಹುದು…