More

    ನೀರಮಾನ್ವಿ ಯಲ್ಲಮ್ಮದೇವಿ ಜಾತ್ರೆ ಫೆ.29 ರಂದು

    ಮಾನ್ವಿ: ನೀರಮಾನ್ವಿ ಯಲ್ಲಮ್ಮದೇವಿ ಜಾತ್ರೆ ಫೆ.29 ರಂದು ಜರುಗಲಿದ್ದು, ಜಾತ್ರೆಗೆ ಬರುವ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಹಸೀಲ್ದಾರ್ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷ ಜಗದೀಶ್ ಚೌರ ಹೇಳಿದರು.

    ಪಟ್ಟಣದ ತಹಸಿಲ್ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಬುಧವಾರ ಮಾತನಾಡಿದರು. ಯಲ್ಲಮ್ಮದೇವಿ ಜಾತ್ರೆಗೆ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳ ಭಕ್ತರು ಆಗಮಿಸಲಿದ್ದಾರೆ. ಜೆಸ್ಕಾಂನಿಂದ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಜಾತ್ರೆಗೆ ಬರುವ ಜನರಲ್ಲಿ ದೇವದಾಸಿ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

    ಗ್ರಾಮ ಪಂಚಾಯಿತಿಯಿಂದ ಸ್ವಚ್ಛತೆ ಕೈಗೊಳ್ಳುವುದರೊಂದಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು. ತಾತ್ಕಾಲಿಕ ಶೌಚಗೃಹ ವ್ಯವಸ್ಥೆ ಮಾಡಬೇಕು. ನೀರಾವರಿ ಇಲಾಖೆಯಿಂದ ಕಾಲುವೆಗೆ ನೀರು ಹರಿಸಲು ವ್ಯವಸ್ಥೆ ಮಾಡಬೇಕು. ಅರೋಗ್ಯ ಇಲಾಖೆಯಿಂದ ತಾತ್ಕಲಿಕ ಅರೋಗ್ಯ ಚಿಕಿತ್ಸ ಕೇಂದ್ರಗಳ ವ್ಯವಸ್ಥೆ, ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಮದ್ಯ ಅಕ್ರಮ ಮಾರಾಟ ಹಾಗೂ ನಕಲಿ ಮದ್ಯ ಮಾರಾಟ ತಡೆಗೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ಅಬಕಾರಿ ಇಲಾಖೆಯಿಂದ ಕ್ರಮ ಕೈಗೊಳ್ಳಬೇಕು. ಮಾನ್ವಿ ಸಾರಿಗೆ ಘಟಕದಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು. ಜಾತ್ರೆ ಸುಗಮವಾಗಿ ನಡೆಯಲು ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಸಹಕಾರ ನೀಡಬೇಕೆಂದು ತಹಸೀಲ್ದಾರ್ ಕೋರಿದರು.

    ತಾಪಂ ಇಒ ಖಾಲೀದ್ ಅಹಮದ್, ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವ ಪಾಟೀಲ್, ಅಗ್ನಿಶಾಮಕ ದಳದ ಅಧಿಕಾರಿ ಹಾಜೀಮಿಯ, ಗ್ರಾಮಸ್ಥರಾದ ಅರಕೇರಿ ರಾಮಣ್ಣ, ಶ್ರೀರಾಮುಲು, ದುರುಗೇಶ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts