ಆಗಸ್ಟ್ 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಲಿತಾಂಶ: ಸೀಟು ಹಂಚಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಆ.21ರಂದು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಸಿಇಟಿ ಹಾಗೂ ನೀಟ್ ವಿದ್ಯಾರ್ಥಿಗಳಿತೆ ಜತೆಜತೆಯಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ. ಈ ಕಾರಣದಿಂದಲೇ ಎರಡು ಬಾರಿ ಅಣಕು ಸೀಟು ಹಂಚಿಕೆ ಮಾಡಲಾಗುತ್ತದೆ. ಇಂಜಿನಿಯರಿಂಗ್ ಮತ್ತಯ ವೈದ್ಯ ಕೋರ್ಸ್‌ಗಳಿಗೆ ಪ್ರತ್ಯೇಕ ಅಣಕು ಲಿತಾಂಶ ಪ್ರಕಟವಾಗಿಲಿದೆ. ಬಳಿಕ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಗೊಂದಲ ಮಾಡಿಕೊಳ್ಳದೆ, ತಮ್ಮ ಆಯ್ಕೆಗಳನ್ನು ದಾಖಲಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸಲಹೆ ನೀಡಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್‌ಗಳಿಗೆ ನೋಂದಣಿ ಮಾಡದಿರುವ ಅಭ್ಯರ್ಥಿಗಳಿಗೆ ನೋಂದಣಿ ಮಾಡಲು ಸದ್ಯದಲ್ಲಿಯೇ ಪ್ರಾಧಿಕಾರದ ಜಾಲತಾಣದಲ್ಲಿದಲ್ಲಿ ಪೋರ್ಟಲ್ ತೆರೆಯಲಾಗುವುದು. ಆದರೆ, ಈಗಾಗಲೇ ಯುಜಿಸಿಇಟಿಗೆ ನೋಂದಣಿಯಾಗಿರುವ ಅಭ್ಯರ್ಥಿಗಳು ರೋಲ್ ನಂಬರ್ ಹಾಕಿ ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಬೇಕು ಎಂದು ತಿಳಿಸಿದ್ದಾರೆ.

ವೈದ್ಯ, ದಂತವೈದ್ಯ ಮತ್ತು ಆಯುಷ್ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ದೊರೆತ ನಂತರ ಇಂಜಿನಿಯರಿಂಗ್ ಸೇರಿ ಇತರೆ ಕೋರ್ಸ್‌ಗಳ ಜತೆಯಲ್ಲಿ ಆಪ್ಷನ್ ಎಂಟ್ರಿ ದಾಖಲಿಸಲು ಅವಕಾಶ ನೀಡಲಾಗುತ್ತದೆ.

ಸೀಟು ಹಂಚಿಕೆ ವೇಳಾಪಟ್ಟಿ

ಆ.7 ಮೊದಲನೇ ಅಣಕು ಸೀಟು ಹಂಚಿಕೆ ಲಿತಾಂಶ ಪ್ರಕಟ
ಆ.9ರಿಂದ 11 ಸಿಇಟಿ ಅಭ್ಯರ್ಥಿಗಳು ಆಯ್ಕೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ (ಸೇರ್ಪಡೆ, ಬದಲಾವಣೆ, ಡೆಲಿಟ್)
ಆ.14 ಎರಡನೇ ಅಣಕು ಸೀಟು ಹಂಚಿಕೆ ಲಿತಾಂಶ ಪ್ರಕಟ
ಆ.14ರಿಂದ 18 ನೀಟ್ ಮತ್ತು ಸಿಇಟಿ ಸೇರಿ ಎಲ್ಲ ಕೋರ್ಸ್‌ಗಳ ಅಭ್ಯರ್ಥಿಗಳು ಆಯ್ಕೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ
ಆ.21 ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆ ಲಿತಾಂಶ ಪ್ರಕಟವಾಗಲಿದೆ

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…