More

    ನಾಳೆ ನೀಟ್ ಪರೀಕ್ಷೆ: ಹಾಫ್​ ಶರ್ಟ್​​-ಚಪ್ಪಲಿ ಕಡ್ಡಾಯ; ಪ್ರವೇಶಪತ್ರದ ಜತೆ ಏನಿರಬೇಕು?

    ಬೆಂಗಳೂರು: ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ (ಮೇ 7) ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದ್ದು, ರಾಜ್ಯದಲ್ಲಿ 1.34 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

    ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 5.20ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12.30ರೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಪರೀಕ್ಷಾ ಪ್ರಾಧಿಕಾರವಾದ ರಾಷ್ಟ್ರೀಯ ಟೆಸ್ಟಿಂಗ್ ಎಜೆನ್ಸಿ (ಎನ್‌ಟಿಎ) ತಿಳಿಸಿದೆ.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಪರೀಕ್ಷೆ ನಡೆಯಲಿದೆ. ರಾಜ್ಯದ 1,34,379 ವಿದ್ಯಾರ್ಥಿಗಳು ಸೇರಿ ದೇಶಾದ್ಯಂತ 20,87,445 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 14,753 ಮಂದಿ ಹೆಚ್ಚಿನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ತಮಿಳು, ತೆಲುಗು, ಉರ್ದು, ಪಂಜಾಬಿ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶವಿದೆ.

    ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಏನು ಅಗತ್ಯ?

    ಅಭ್ಯರ್ಥಿಗಳು ತಮ್ಮ ಪ್ರವೇಶಪತ್ರದ ಜತೆಗೆ ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್, ಪಾನ್ ಕಾರ್ಡ್, ಡ್ರೈವಿಂಗ್ ಪರವಾನಗಿ ಸೇರಿ ಸರ್ಕಾರ ನೀಡಿರುವ ಯಾವುದಾದರೂ ಒಂದು ಗುರುತಿನ ಚೀಟಿ ಕೊಂಡೊಯ್ಯಬೇಕು.

    ಇದನ್ನೂ ಓದಿ: ಜೊತೆಗಿದ್ದವನ ಹೆಣವನ್ನೇ 2 ವರ್ಷ ಫ್ರಿಡ್ಜ್​ನಲ್ಲಿಟ್ಟ; ಸತ್ತವನ ಹಣವನ್ನೇ ದಿನಗಟ್ಟಲೆ ಬಳಸಿಬಿಟ್ಟ!

    ಮಧುಮೇಹದಿಂದ ಬಳಲುತ್ತಿರುವ ಅಭ್ಯರ್ಥಿಗಳು ಸಕ್ಕರೆ ಮಾತ್ರೆಗಳು/ಹಣ್ಣುಗಳು (ಬಾಳೆಹಣ್ಣು, ಸೇಬು, ಕಿತ್ತಳೆ) ಮತ್ತು ಪಾರದರ್ಶಕ ನೀರಿನ ಬಾಟಲಿಗಳಂತಹ ತಿನ್ನಬಹುದಾದ ಪದಾರ್ಥಗಳನ್ನು ಕೊಂಡೊಯ್ಯಲು ಅವಕಾಶವಿದೆ.

    ಹಾಫ್ ಶರ್ಟ್-ಚಪ್ಪಲಿ ಕಡ್ಡಾಯ

    ಎಲ್ಲ ರೀತಿಯ ಎಲೆಕ್ಟ್ರಾನಿಕ್ ವಸ್ತಗಳು, ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್‌ಗಳು, ವಾಚ್, ಆಭರಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ವಿದ್ಯಾರ್ಥಿಗಳು ಸರಳ ಉಡುಗೆ, ಅರ್ಧತೋಳಿನ ಉಡುಗೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ತುಂಬುತೋಳಿನ ವಸ್ತ್ರಗಳಿಗೆ ಅವಕಾಶವಿಲ್ಲ. ಶೂಗಳಿಗೆ ಅನುಮತಿ ಇಲ್ಲ, ಚಪ್ಪಲಿಗಳನ್ನು ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದೆ.

    ಇದನ್ನೂ ಓದಿ: ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

    ಸಂಚಾರ ದಟ್ಟಣೆ ಆತಂಕ: ಪ್ರಧಾನಿ ಮೋದಿ ಸೇರಿ ವಿವಿಧ ನಾಯಕರು ಬೆಂಗಳೂರು, ಹಾವೇರಿ, ಬಾದಾಮಿ ಒಳಗೊಂಡಂತೆ ರಾಜ್ಯಾದ್ಯಂತ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ, ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಸಂಚಾರ ದಟ್ಟಣೆ ಉಂಟಾಗುವ ಆತಂಕವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 12.30ರೊಳಗೆ ಹಾಜರಿರಬೇಕಿದೆ. ಮೋದಿ ರೋಡ್ ಶೋ ಬೆಳಗ್ಗೆಯೇ ನಡೆಯುವುದರಿಂದ ವಿದ್ಯಾರ್ಥಿಗಳಲ್ಲಿ ಏನಾಗುವುದೋ ಎಂಬ ಆತಂಕ ಮನೆಮಾಡಿದೆ.

    ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts