More

  ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

  ರಾಣೆಬೆನ್ನೂರ: ಸತತ ಅಧ್ಯಯನದ ಮೂಲಕ ಗುರುವಿನ ಮಾರ್ಗದರ್ಶನ ಪಡೆದು ಮುನ್ನಡೆದರೆ ಸಾಧನೆಯ ಶಿಖರ ಏರಬಹುದು ಎಂದು ಆರ್‌ಟಿಇಎಸ್ ಮಹಾವಿದ್ಯಾಲಯದ ಅಧ್ಯಕ್ಷ ಸುಭಾಷ ಸಾವಕಾರ ಹೇಳಿದರು.
  ನಗರದ ಆರ್‌ಟಿಇಎಸ್ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು.
  ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದಿಲ್ಲೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರದ್ದಾಗಿದೆ. ವಿದ್ಯಾರ್ಥಿಗಳು ಸಹ ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಂಯಮ, ಗುರು-ಹಿರಿಯರಲ್ಲಿ ಗೌರವ, ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.
  ಮಹಾವಿದ್ಯಾಲಯದ ಪ್ರಾಚಾರ್ಯೆ ಸುಮಾ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
  ಉಪನ್ಯಾಸಕರಾದ ಎಸ್.ಕೆ. ಕಡೂರ, ಓ.ಎಫ್. ದ್ಯಾವನಗೌಡರ, ಇಜಾಜ್ ಮಾಲದಾರ, ರಾಜು ಲಂಬಾಣಿ, ದಾದಾಫೀರ ಹಾಗೂ ಸಿಬ್ಬಂದಿ ಇದ್ದರು.

  See also  ಮೊದಲ ರಾತ್ರಿ ಕಾಮೋತ್ತೇಜಕ ಮಾತ್ರೆ ಸೇವಿಸಿದ ಗಂಡ! ನಂತರ ನಡೆದಿದ್ದು ಘೋರ ದುರಂತ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts