More

    ಸರ್ಕಾರಿ ಶಾಲಾ ಮಕ್ಕಳಿಗೆ ನೀಟ್

    ತೀರ್ಥಹಳ್ಳಿ: ಮುಂದಿನ ವರ್ಷದಿಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ ಪರೀಕ್ಷೆಗೆ ತರಬೇತಿ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
    ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಶನಿವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ಸಾಮರ್ಥ್ಯ ಹೆಚ್ಚಿಸಲು ಶಾಲೆಯಲ್ಲಿ ಸಂಜೆ ವಿಶೇಷ ತರಗತಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
    ಮಕ್ಕಳ ಸೇವೆ ಮಾಡುವ ಭಾಗ್ಯ ನನಗೆ ದೊರಕಿದ್ದು ಸಮರ್ಥವಾಗಿ ಶಿಕ್ಷಣ ಇಲಾಖೆಯ ಕಾಯಕಲ್ಪಕ್ಕೆ ನಿರ್ಧರಿಸಲಾಗಿದೆ. ಮಕ್ಕಳ ಭವಿಷ್ಯ ವೃದ್ಧಿಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದ್ದು ಪಾಲಕರ ಒತ್ತಡ ಕಡಿಮೆ ಮಾಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣದ ಜತೆಗೆ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ನೀಡುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರ ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಿದೆ ಎಂದು ಹೇಳಿದರು.
    ವಿಧಾನಸಭೆ ಚುನಾವಣೆ ಮುನ್ನ ನೀಡಿದ ಭರವಸೆಯನ್ನು ಗ್ಯಾರಂಟಿ ಯೋಜನೆಗಳ ಜಾರಿ ಮೂಲಕ ಈಡೇರಿಸಲಾಗಿದೆ. ಯಾವ ಸರ್ಕಾರದಿಂದಲೂ ಈ ಗ್ಯಾರಂಟಿಗಳನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಯಲ್ಲಿ ರೈತರ ಪಂಪ್‌ಸೆಟ್‌ಗೆ ನೀಡಿದ ಉಚಿತ ವಿದ್ಯುತ್ ಯೋಜನೆ ಜಾರಿಗೆ ತಂದರು. ಈ ಯೋಜನೆ ಜಾರಿಯಾಗಿ 32 ವರ್ಷ ಕಳೆದರೂ ಜಾರಿಯಲ್ಲಿರುವುದು ಇದಕ್ಕೆ ಸಾಕ್ಷ್ಯ ಆಗಿದೆ. ಮಧ್ಯವರ್ತಿಗಳು ಇಲ್ಲದಂತೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು ಗ್ಯಾರಂಟಿ ಯೋಜನೆಯ ಉಳಿದ ಎಲ್ಲಾ ಸೌಲಭ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್ ಮಾತನಾಡಿ, ಕೆಲವು ತಾಂತ್ರಿಕ ಕಾರಣಗಳಿಂದ ಗ್ಯಾರಂಟಿ ಯೋಜನೆಯಲ್ಲಿ ಫಲಾನುಭವಿಗಳು ವಂಚಿತರಾಗಿದ್ದರು. ಈ ಸಮಾವೇಶದಿಂದ ವಂಚಿತರಾಗಿರುವ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ದೊರೆಯಲಿದೆ. ರಾಜ್ಯ ಸರ್ಕಾರ ಮಾತಿನಂತೆ ನಡೆದಿದ್ದು ಇದರಿಂದ ಬಹಳ ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ದೊರೆತಿದೆ ಎಂದು ಅಭಿಪ್ರಾಯಪಟ್ಟರು.
    ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾತನಾಡಿ, ಗ್ಯಾರಂಟಿ ಕಾರ್ಯಕ್ರಮಗಳು ದೇಶದ ಬಹುದೊಡ್ಡ ಯೋಜನೆ ಆಗಿದೆ. ಕೋಟ್ಯಂತರ ಸಂಖ್ಯೆಯ ಜನರಿಗೆ ಯೋಜನೆಯಿಂದ ಪ್ರಯೋಜನವಾಗುತ್ತಿದೆ. ದೇಶದ ಯಾವ ರಾಜ್ಯಗಳಲ್ಲೂ ಇಷ್ಟು ದೊಡ್ಡ ಯೋಜನೆ ಜಾರಿಯಲ್ಲಿ ಇಲ್ಲ. ಪ್ರತಿಯೊಬ್ಬರಿಗೂ ಸರ್ಕಾರದ ಗ್ಯಾರಂಟಿ ಯೋಜನೆ ಲ ತಲುಪಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ ಎಂದರು.
    ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಕಟ್ಟಡ ಕಾರ್ಮಿಕರ 23 ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಲ್ಯಾಪ್‌ಟಾಪ್ ವಿತರಿಸಲಾಯಿತು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಹಮತುಲ್ಲಾ ಅಸಾದಿ ಮಾತನಾಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಕಾರ್ಮಿಕ ಇಲಾಖೆ ಅಧಿಕಾರಿ ಸುಮಾ, ತಹಸೀಲ್ದಾರ್ ಜಕ್ಕನಗೌಡರ್, ತಾಪಂ ಇಒ ಎಂ.ಶೈಲಾ ಇದ್ದರು. ಕಂದಾಯ ಇಲಾಖೆಯ ಸೂರತ್ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts