ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿಕೆಶಿ

dks
Published on

ಬೆಂಗಳೂರು:
ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೀಟ್ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ ಎಂದರು.
ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ ನೀಡಬಹುದು. ಈ ಪರೀಕ್ಷೆಯಿಂದ ನಮ್ಮ ರಾಜ್ಯದ ಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತಿವೆ ಎಂದರು.
ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇಲ್ಲಿನ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಇನ್ನು ನೀಟ್ ಅಕ್ರಮದ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆಯಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net