ನೀಟ್​​ ಪರೀಕ್ಷೆ ವಂಚಿತರಿಗೆ ಮತ್ತೊಂದು ಅವಕಾಶ ನೀಡಬೇಕು: ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ

ಬೆಂಗಳೂರು: ನೀಟ್​​​​ ಪರೀಕ್ಷೆ ವಂಚಿತರಿಗೆ ಮತ್ತೊಂದು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್​​​ ಮೂಲಕ ಮನವಿ ಮಾಡಿದ್ದಾರೆ.

ಹಂಪಿ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿಗೆ ಏಳು ಗಂಟೆ ತಡವಾಗಿ ಆಗಮಿಸಿದ್ದರಿಂದ ಉತ್ತರ ಕರ್ನಾಟಕದಿಂದ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ಹಲವು ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಆದ್ದರಿಂದ ಕೇಂದ್ರ ಸರ್ಕಾರ ಅವರಿಗೆ ಮರು ಪರೀಕ್ಷೆ ನಡೆಸಬೇಕು ಎಂದು ಟ್ವಿಟರ್​​ನಲ್ಲಿ ಹೇಳಿದ್ದಾರೆ.

ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೋಷ್ ಗೋಯೆಲ್ ಮತ್ತು ಮಾನವ ಸಂಪನ್ಮೂಲ ಇಲಾಖೆಯ ಸಚಿವ ಪ್ರಕಾಶ್ ಜಾವಡೇಕರ್ ಅವರು ಅವಕಾಶ ವಂಚಿತ ವಿದ್ಯಾರ್ಥಿಗಳ ಪರ ನಿಂತು ಮತ್ತೊಂದು ಅವಕಾಶ ಕೊಡುವಂತೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)