ಎನ್​ಇಇಟಿ (ಯುಜಿ) ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

neet
Published on

ನವದೆಹಲಿ: ರಾಷ್ಟ್ರೀಯ ಅರ್ಹತಾ / ಪ್ರವೇಶ ಪರೀಕ್ಷೆ (ನೀಟ್- ಯುಜಿ) ಯ ಪ್ರವೇಶ ಪತ್ರಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ವೆಬ್​ಸೈಟ್​​ನಲ್ಲಿ ಬಿಡುಗಡೆ ಮಾಡಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶಪತ್ರವನ್ನು ntaneet.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸೆಪ್ಟೆಂಬರ್ 13 ರಂದು ಪರೀಕ್ಷೆ ನಡೆಯಲಿದ್ದು, 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2546 ರಿಂದ 3843 ಕ್ಕೆ ಹೆಚ್ಚಿಸಲಾಗಿದೆ ಮತ್ತು ಸಾಮಾಜಿಕ ದೂರವನ್ನು ಕಾಪಾಡುವ ದೃಷ್ಟಿಯಿಂದ ಪ್ರತಿ ಕೋಣೆಯಲ್ಲಿ ಕುಳಿತುಕೊಳ್ಳುವ ಅಭ್ಯರ್ಥಿಗಳ ಸಂಖ್ಯೆಯನ್ನು 24 ರಿಂದ 12 ಕ್ಕೆ ಇಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net