ವಿಜಯವಾಣಿ ಸುದ್ದಿಜಾಲ ಧಾರವಾಡ
ಮನುಷ್ಯರಲ್ಲಿ ಸಮಸ್ಯೆಗಳು ಸಹಜ. ಕೆಲ ಸಮಸ್ಯೆಗಳನ್ನು ಬಹಿರಂಗವಾಗಿ ಹೇಳಿಕೊಳ್ಳಲು ಮುಜುಗರವಾಗುತ್ತದೆ. ಆದರೆ ಒಳ್ಳೆ ಪುಸ್ತಕಗಳನ್ನು ಓದುವ ಮೂಲಕ ನಮ್ಮಲ್ಲಿನ ನಕಾರಾತ್ಮಕ ಯೋಜನೆಗಳನ್ನು ದೂರ ಮಾಡಿ, ಸಕಾರಾತ್ಮಕ ಚಿಂತನೆ ಬೆಳಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ದೊಡ್ಡಮನಿ ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಧಾರವಾಡ ಕೇಂದ್ರ ಕಾರಾಗೃಹ ಆಶ್ರಯದಲ್ಲಿ ಮನೋನ್ಯಾಯ ಯೋಜನೆ 2024ರ ಅಡಿ ಕೇಂದ್ರ ಕಾರಾಗೃಹ ಬಂಧಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ಸುರಕ್ಷತೆ ಹಾಗೂ ಒತ್ತಡ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರಾಗೃಹ ಬಂಧಿಗಳು ಒತ್ತಡಗಳನ್ನು ಸರಿಯಾಗಿ ನಿರ್ವಹಣೆ ಮಾಡಿಕೊಂಡು ಉತ್ತಮ ಬದುಕಿನ ಶೈಲಿ ಅಳವಡಿಸಿಕೊಳ್ಳಬೇಕು. ಸಮಸ್ಯೆಗಳನ್ನು ನಮ್ಮಲ್ಲೇ ಇಟ್ಟುಕೊಂಡು ಕೊರಗುವುದಕ್ಕಿಂತ ವಿಶ್ವಾಸವುಳ್ಳ ಸಂಬಂಧಿಕರು, ಸ್ನೇಹಿತರು, ಮನೋವೈದ್ಯರು, ವೃತ್ತಿಪರ ಮಾನಸಿಕ ಆರೋಗ್ಯ ತಜ್ಞರು, ಆಪ್ತ ಸಮಾಲೋಚನೆಕಾರರೊಂದಿಗೆ ಹಂಚಿಕೊಂಡಾಗ ಒತ್ತಡಗಳಿಗೆ ಸರಿಯಾದ ಪರಿಹಾರ ಕಂಡುಕೊಳ್ಳಬಹುದು ಎಂದರು.
ಕೇಂದ್ರ ಕಾರಾಗೃಹ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ವಕೀಲರ ಸಂಘದ ಅಧ್ಯಕ್ಷ ಅಶೋಕ ಏಣಗಿ, ಪಿ. ಮಹದೇವ ನಾಯ್ಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲ ಸೋಮಶೇಖರ ಜಾಡರ, ಡಾ. ಮೋಹನಕುಮಾರ ಮಾತನಾಡಿದರು.
ಪುಸ್ತಕಗಳ ಓದಿನಿಂದ ನಕಾರಾತ್ಮಕ ಯೋಚನೆಗಳು ದೂರ

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…