More

    ಕರ್ತವ್ಯಲೋಪ: ಪರಿಸರ ಅಧಿಕಾರಿಗಳಿಬ್ಬರ ಅಮಾನತು

    ಬೆಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆ ಇಬ್ಬರು ಪರಿಸರ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶ ಹೊರಡಿಸಿದೆ.

    ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ಖಾಸಗಿ ಕಂಪನಿಯ ಪ್ಲಾಸ್ಟಿಕ್ ತ್ಯಾಜ್ಯ ಮರು ಸಂಸ್ಕರಣಾ ಘಟಕಕ್ಕೆ ಸ್ಥಾಪನಾ ಪತ್ರ ಹಾಗೂ ಸಮ್ಮತಿ ಪತ್ರ ನೀಡುವ ವೇಳೆ ಮಂಡಳಿಯ ನಿಯಮಗಳನ್ನು ಸಮರ್ಪಕವಾಗಿ ಜಾರಿಗೆ ತರಲು ವಿಲವಾಗಿರುವ ಪರಿಸರ ಅಧಿಕಾರಿಗಳಾದ ಸಿ.ಆರ್.ಮಂಜುನಾಥ್ ಹಾಗೂ ಎಸ್.ಕೆ.ವಾಸುದೇವ್ ಅವರನ್ನು ಅಮಾನತುಗೊಳಿಸಿ ಮಂಡಳಿ ಅಧ್ಯಕ್ಷ ಡಾ. ಶಾಂತ್ ಎ ತಮ್ಮಯ್ಯ ಬುಧವಾರ ಆದೇಶ ಹೊರಡಿಸಿದ್ದಾರೆ.

    ಕಳೆದ ವರ್ಷ ನವೆಂಬರ್‌ನಲ್ಲಿ ಈ ಇಬ್ಬರೂ ಅಧಿಕಾರಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ ಕೇಳಿಬಂದಿದ್ದ ದೂರು ಆಧರಿಸಿ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ಪೈಕಿ ಇಬ್ಬರ ವಿರುದ್ಧ ಗುರುತರ ಆರೋಪ ಇದ್ದ ಕಾರಣ ಮಂಡಳಿಯ ನೌಕರರಿಗೆ ಸರಿಹೊಂದದ ರೀತಿಯಲ್ಲಿ ವರ್ತಿಸಿರುವುದು ಹಾಗೂ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದ ಕಾರಣ ಅಮಾನತು ಮಾಡಲಾಗಿದೆ. ಇದೇ ವೇಳೆ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts