ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜನಸಾಮಾನ್ಯರು ಹಾಗೂ ಕೆಲವು ನಟ, ನಟಿಯರು ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಆಗ್ರಹಿಸುತ್ತಿದ್ದಾರೆ.
ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು. ಪಾಗಲ್ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.
ಈ ಪ್ರಕರಣ ಸಂಬಂಧ ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ ಪೋಸ್ಟ್ ಬೆನ್ನಲ್ಲೇ ಇದೀಗ ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರಚಿತಾ ರಾಮ್ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ʻʻಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೇ. ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಮಾನ್ಯರ ಕೈಗೆ ಒಪ್ಪಿಸಿʼʼಎಂದು ಬರೆದುಕೊಂಡಿದ್ದಾರೆ.
ನಟ ದರ್ಶನ್ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್ ಸ್ಪರ್ಶ; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ…
ಶಿಕ್ಷೆ ಆಗಬೇಕು, ಆದ್ರೆ ನನ್ನ ಮಗ ಫಯಾಜ್‌ಗೆ ಪ್ರಪೋಸ್ ಮಾಡಿದ್ದೆ ನೇಹಾ; ಆರೋಪಿ ತಾಯಿ ಮುಮ್ತಾಜ್