More

    ನೇಹಾ ಹತ್ಯೆ ಪ್ರಕರಣ: 9 ಅಲ್ಲ 14, ಹೃದಯಕ್ಕೂ ಇರಿತ, ಮರಣೋತ್ತರ ವರದಿಯಲ್ಲಿ ಸ್ಫೋಟಕ ಸಂಗತಿ ಬಯಲು

    ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ. ನಿತ್ಯವೂ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಕೊಲೆಯಾದ ನೇಹಾಳ ಮರಣೋತ್ತರ ವರದಿ ಬಿಡುಗಡೆಯಾಗಿದ್ದು, ಭಯಾನಕ ಸಂಗತಿ ಬಯಲಾಗಿದೆ

    ಆರೋಪಿ ಫಯಾಜ್​, ನೇಹಾಳಿಗೆ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. 9 ಬಾರಿ ಇದಿದ್ದಾನೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಶವಪರೀಕ್ಷೆಯಲ್ಲಿ ಅಸಲಿ ಸಂಗತಿ ಬಯಲಾಗಿದೆ. ಇದಲ್ಲದೇ ನೇಹಾಳ ಕತ್ತಿನ ಭಾಗದಲ್ಲಿರುವ ರಕ್ತನಾಳ ತುಂಡಾಗಿದೆ ಎನ್ನಲಾಗಿದೆ. ಅತಿಯಾದ ರಕ್ತಸ್ರಾವದಿಂದಲೇ ಆಕೆ ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಫಯಾಜ್​ ನೇಹಾಳ ಹೃದಯಕ್ಕೂ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬರಬೇಕಾಗಿದೆ.

    ಇಬ್ಬರ ಬಂಧನ
    ಹುಬ್ಬಳ್ಳಿ-ಧಾರತವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನೇಹಾ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್​ ಫಾರ್​ ಲವ್​ ಎಂಬ ಅಭಿಯಾನ ಶುರುವಾಗಿದ್ದು, ಇದರಲ್ಲಿ ನೇಹಾ ಹಾಗೂ ಫಯಾಜ್​ ಜೊತೆಗಿರುವ ಫೋಟೋಗಳನ್ನು ಹಾಕಿಕೊಳ್ಳುವ ಮೂಲಕ ಹತ್ಯೆಯನ್ನು ಸಮರ್ಥಿಸಿ ಪೋಸ್ಟ್​ ಹಾಕಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನೇಹಾ ಹಾಘೂ ಫಯಾಜ್​ ಫೋಟೋ ವೈರಲ್​ ಮಾಡಿದ ಸಂಬಂಧ ಪೊಲೀಸರು ಧಾರವಾಡ ನಿವಾಸಿಗಳಾದ ಸಾದಿಕ್​ ತಡಕೋಡ ಹಾಗೂ ಆದಿಲ್​ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದಾರೆ.

    ಪ್ರಕರಣದ ಹಿನ್ನೆಲೆ?
    ಏಪ್ರಿಲ್​ 18ರಂದು ಸಂಜೆ 4:45ರ ಸುಮಾರಿಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಒಳಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದ ವ್ಯಕ್ತಿ (ಫಯಾಜ್​), ಎಂಸಿಎ ವಿದ್ಯಾರ್ಥಿನಿ (ನೇಹಾ ಹಿರೇಮಠ್) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಚಿಕಿತ್ಸೆ ಫಲಕಾರಿಗಾದೆ ಮೃತಪಟ್ಟಿದ್ದಾಳೆ. ಈ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫಯಾಜ್​ ಹಾಗೂ ನೇಹಾ ಜೊತೆಗಿರುವ ಫೋಟೋಗಳನ್ನು ಹರಿಬಿಡುವ ಮೂಲಕ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ನೀಡಲಾಗಿತ್ತು.

    ತಡರಾತ್ರಿಯ ಈ ಕೆಟ್ಟ ಅಭ್ಯಾಸವೇ ಹೀನಾಯ ಸೋಲಿಗೆ ಕಾರಣ: ಆರ್​ಸಿಬಿ ವಿರುದ್ಧ ಸುರೇಶ್​ ರೈನಾ ಕಿಡಿ!

    ವಿರಾಟ್​ ಕೊಹ್ಲಿ ಔಟ್​ ಎಂಬ ತೀರ್ಪು: ಅಂಪೈರ್​ಗಳ ವಿರುದ್ಧ ಗುಡುಗಿದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts