More

    ನೇಹಾ ಕೊಲೆ; ರಾಜ್ಯ ಸರ್ಕಾರದಿಂದ ಚಾರಿತ್ರ್ಯ ಹರಣ ಮಾಡುವ ಕುಕೃತ್ಯ

    ಬೆಂಗಳೂರು: ರಾಜ್ಯ ಸರ್ಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾಳ ಚಾರಿತ್ರ್ಯಹರಣ ಮಾಡುವ ಕುಕೃತ್ಯ ನಡೆಸಿದೆ ಎಂದು ಜೆಡಿಎಸ್ ಟೀಕಿಸಿದೆ.

    ಸುಶಿಕ್ಷಿತರು, ವಿದೇಶದಲ್ಲಿ ಓದಿದವರು ಹಾಗೂ ನಾಡಿನ ಗೃಹಮಂತ್ರಿ ಡಾ.ಜಿ.ಪರಮೇಶ್ವರ ಅವರು ಹುಬ್ಬಳ್ಳಿಯಲ್ಲಿ ವಿಕೃತಪ್ರೇಮಿಗೆ ಬಲಿಯಾದ ವಿದ್ಯಾರ್ಥಿನಿ ಬಗ್ಗೆ ಬೇಜವಾಬ್ದಾರಿತನದಿಂದ ನಾಲಿಗೆ ಜಾರಿಬಿಟ್ಟು ಕಾಂಗ್ರೆಸ್ ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಅವರಿಗೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.

    ಕೊಲೆಯಾದ ನತದೃಷ್ಟ ಯುವತಿ ಹಾಗೂ ಕೊಲೆಗಾರ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೊಲೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲೆತ್ನಿಸಿದ ಮಂತ್ರಿಗಳು, ಅತ್ಯಂತ ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿದೆ.

    ಇಂತಹ ಕೊಲೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಹೇಳಿರುವ ಸಚಿವರ ಅಸಲಿ ಉದ್ದೇಶ ಏನು? ಎನ್ನುವುದು ಇಲ್ಲಿ ಪ್ರಶ್ನಾರ್ಹ. ಜನರಿಂದ ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾದ ಮೇಲೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಹೊಣೆಗೇಡಿ ಹೇಳಿಕೆ ಕೊಟ್ಟು ಹೆತ್ತ ತಂದೆತಾಯಿಗೆ ಮತ್ತಷ್ಟು ನೋವು ಕೊಟ್ಟ ಸಚಿವರ ಹೇಳಿಕೆ ಖಂಡಿಸಿ ರಾಜ್ಯ ಮಹಿಳಾ ಆಯೋಗ ಈಗಾಗಲೇ ಸ್ವಯಂ ಪ್ರಕರಣ ದಾಖಲು ಮಾಡಿಕೊಳ್ಳಬೇಕಿತ್ತು. ಹಾಗೆ ಆಗಿಲ್ಲ, ಇದು ನಿಜಕ್ಕೂ ವಿಷಾದನೀಯ ಎಂದು ಜೆಡಿಎಸ್ ಹೇಳಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಕೊಟ್ಟ ಹೇಳಿಕೆ ಕಾಂಗ್ರೆಸ್ ನೈತಿಕ ಅವನತಿಯ ಪರಾಕಾಷ್ಠೆಯಾಗಿದೆ. ಬೆಳಗ್ಗೆಯಿಂದ ಕೆಲ ಫೋಟೋಗಳು ಹರಿದಾಡುತ್ತಿವೆ, ಅವುಗಳನ್ನು ಹೊರಬಿಟ್ಟವರು ಯಾರು? ಪ್ರಕರಣದ ದಿಕ್ಕು ತಪ್ಪಿಸಲು ಸರ್ಕಾರವೇ ಅಧಿಕಾರಶಾಹಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ? ಎಂದು ಜೆಡಿಎಸ್ ಆರೋಪಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts