'ನೇಹಾ ಹತ್ಯೆ ಖಂಡಿತವಾಗಿಯೂ ಲವ್​ಜಿಹಾದ್‌ ಪ್ರಕರಣ': ಅಮಿತ್ ಶಾ

amith shaw
Published on

ನವದೆಹಲಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್‌ ಪ್ರಕರಣಕ್ಕೆ ನಾವು ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣವೇ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ನೇಹಾ ಹಿರೇಮಠ್‌ ಪ್ರಕರಣ ನಿಜವಾಗಿಯೂ ಲವ್‌ ಜಿಹಾದ್‌ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ ಎಂದು ಹೇಳಿದರು.

ನೇಹಾ ಹೀರೇಮಠ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ವೈಯಕ್ತಿಕ ಕಾರಣಗಳಿಗೆ ನಡೆದಿದೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕ ಸಿಎಂ, ಡಿಸಿಎಂ ಅಲ್ಪ ಸಂಖ್ಯಾತರ ಮತಬ್ಯಾಂಕ್‌ಗಾಗಿ ಆ ರೀತಿ ಹೇಳಿದ್ದಾರೆ. ಅವರು ಮೊದಲಿನಿಂದಲೂ ತುಷ್ಟೀಕರಣ ಮಾಡುತ್ತ ಬರುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಲೇಜು ಕ್ಯಾಂಪಸ್‌ನಲ್ಲಿ ಈ ರೀತಿ ಕೊಲೆ ನಡೆಯುತ್ತದೆ ಎಂದರೆ ಅದು ವೈಯಕ್ತಿಕ ವಿಷಯ ಹೇಗಾಗುತ್ತದೆ? ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಸಿಗಬೇಕೋ ಬೇಡವೋ? ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಈ ರೀತಿ ಸತ್ಯ ಮುಚ್ಚಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net