More

    ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಪ್ರಧಾನಿ ನೆಹರು: ಮೋದಿ 4ನೇ ಪ್ರಧಾನಿ, ರಾಜಕೀಯವಾಗಿ 2ನೇ ಭೇಟಿ

    ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆಗೆಂದು ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಅವರಿಂದು (ಮಾ.12) ಭೇಟಿ ನೀಡುತ್ತಿದ್ದಾರೆ. ಪ್ರಧಾನಿಯಾಗಿ ಮೊದಲ ಭೇಟಿ ಹಾಗೂ ರಾಜಕೀಯವಾಗಿ ಎರಡನೇ ಭೇಟಿ ಇದಾಗಿದೆ.

    PM modi Mandya Visit

    ಅಂದಹಾಗೆ ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಯಾರೆಂದರೆ ಅದು ಜವಹರಲಾಲ್ ನೆಹರು. 1962ರಲ್ಲಿ ಮಂಡ್ಯ ಜಿಲ್ಲಾ ಕ್ರೀಡಾಂಗಣಕ್ಕೆ ನೆಹರು ಆಗಮಿಸಿದ್ದರು. ಅಂದು ಲೋಕಸಭೆಗೆ ಸ್ಪರ್ಧಿಸಿದ್ದ ಎಂ.ಕೆ. ಶಿವನಂಜಪ್ಪ ಪರ ಪ್ರಚಾರಕ್ಕೆ ಆಗಮಿಸಿದ್ದರು. ಬಳಿಕ 1977ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ಲೋಕಸಭೆಗೆ ಸ್ಪರ್ಧಿಸಿದ್ದ ಚಿಕ್ಕಲಿಂಗಯ್ಯ ಪರ ಪ್ರಚಾರಕ್ಕೆ ಬಂದಿದ್ದರು. ಮಂಡ್ಯ ಜಿಲ್ಲಾ‌ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆದಿತ್ತು.

    ಇದಾದ ನಂತರ 1979ರಲ್ಲಿ ಪ್ರಧಾನಿ ಚರಣ್ ಸಿಂಗ್ ಅವರು ಮಂಡ್ಯಕ್ಕೆ ಭೇಟಿ ಕೊಟ್ಟರು. ದೇವರಾಜು ಅರಸು ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು.

    ಇದನ್ನೂ ಓದಿ: ಕಾಮಗಾರಿ ಪೂರ್ಣಗೊಳಿಸದೇ ಉದ್ಘಾಟನೆ: ನಗರದಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

    ಇಂದು ಮಂಡ್ಯಕ್ಕೆ 4ನೇ ಪ್ರಧಾನಿ ಭೇಟಿ ಮಾಡಲಿದ್ದಾರೆ. ರಾಜಕೀಯವಾಗಿ ಮಂಡ್ಯಕ್ಕೆ ಎರಡನೇ ಬಾರಿ ಮೋದಿ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ 2004ರಲ್ಲಿ ಗುಜರಾತ್ ಸಿಎಂ ಆಗಿದ್ದಾಗ ಮಂಡ್ಯಕ್ಕೆ ಭೇಟಿ ನೀಡಿದ್ದರು. ಮದ್ದೂರು ಕ್ರೀಡಾಂಗಣಕ್ಕೆ ಬಿಜೆಪಿ ಅಭ್ಯರ್ಥಿ ಮಹೇಶ್ ಚಂದ್ ಪರ ಪ್ರಚಾರಕ್ಕೆ ಬಂದಿದ್ದರು/ ಇದೀಗ ಪ್ರಧಾನಿಯಾಗಿ ಮೊದಲ ಬಾರಿ ಮಂಡ್ಯಕ್ಕೆ ಮೋದಿ ಭೇಟಿ ನೀಡುತ್ತಿದ್ದಾರೆ.

    PM modi Mandya Visit

    ಬೆಳಗ್ಗೆ 11.20ಕ್ಕೆ ಮಂಡ್ಯಕ್ಕೆ ಆಗಮಿಸಲಿರುವ ಮೋದಿ, ಪಿಇಎಸ್ ಕಾಲೇಜು ಮೈದಾನಕ್ಕೆ ಹೆಲಿಕಾಪ್ಟರ್ ಮೂಲಕ ಬರಲಿದ್ದಾರೆ. ಬೆಳಗ್ಗೆ 11.25ಕ್ಕೆ ಮಂಡ್ಯದ ಪ್ರವಾಸಿ ಮಂದಿರದಿಂದ ರೋಡ್ ಶೋ ಆರಂಭವಾಗಲಿದ್ದು, 11.30ಕ್ಕೆ ಸಂಜಯ್ ವೃತ್ತಕ್ಕೆ ಆಗಮಿಸಲಿದೆ. 11.33 ಕ್ಕೆ ಮಹಾವೀರ್ ವೃತ್ತಕ್ಕೆ ಎಂಟ್ರಿ, 11.37ಕ್ಕೆ ನಂದ ವೃತ್ತಕ್ಕೆ ಎಂಟ್ರಿ ಹಾಗೂ 11.40ಕ್ಕೆ ಅಮರಾವತಿ ಬಳಿ ಇರುವ ಹೆದ್ದಾರಿಗೆ ರೋಡ್​ ಶೋ ಎಂಟ್ರಿ ಕೊಡಲಿದೆ. ಹೈವೆ ಲೋಕಾರ್ಪಣೆ ನಂತರ ಗಜ್ಜಲೆಗೆರೆ ವೇದಿಕೆಯತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಲಿದ್ದಾರೆ. ವೇದಿಕೆ ಕಾರ್ಯಕ್ರಮ ಮುಗಿಸಿ ಗಜ್ಜಲೆಗೆರೆ ಬಳಿ‌ ನಿರ್ಮಾಣವಾಗಿರುವ ಹೆಲಿಪ್ಯಾಡ್​ನಿಂದ ಧಾರವಾಡಕ್ಕೆ ಪ್ರಧಾನಿ ಮೋದಿ ತೆರಳಲಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇಂದು ಸಕ್ಕರೆ ನಾಡಲ್ಲಿ ಮೋದಿ ಹವಾ! ಪ್ರಧಾನಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ…

    ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts