25.7 C
Bangalore
Sunday, December 15, 2019

ನೆರೆ ಪರಿಹಾರಕ್ಕಾಗಿ 1,500 ಕೋಟಿ ರೂ. ಬಿಡುಗಡೆ – ಜಗದೀಶ ಶೆಟ್ಟರ್

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಬೆಳಗಾವಿ: ರಾಜ್ಯ ಬಜೆಟ್‌ನಿಂದ ನೆರೆ ಪರಿಹಾರಕ್ಕಾಗಿ 1,500 ಕೋಟಿ ರೂ.ಬಿಡುಗಡೆಯಾಗಿದೆ. ಜತೆಗೆ ಬೆಳಗಾವಿ ಜಿಲ್ಲೆಗೆ 200 ಕೋಟಿ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಎಂಡಿಆರ್‌ಎಫ್ ನಿಯಮದ ಪ್ರಕಾರ 3,200 ರೂ. ಜತೆಗೆ ರಾಜ್ಯ ಬಜೆಟ್‌ನಿಂದ 6,700 ಸೇರಿಸಿ 10 ಸಾವಿರ ರೂ. ಪರಿಹಾರ ನೀಡಲಾಗಿದೆ. ಪ್ರವಾಹ ಪ್ರದೇಶಗಳಲ್ಲಿ ಮನೆಗಳ ದುರಸ್ತಿಗಾಗಿ ತಲಾ 1ಲಕ್ಷ ರೂ. ರಂತೆ 1000 ಕೋಟಿ ರೂ. ಬಿಡುಗಡೆ ಬಿಡುಗಡೆ ಮಾಡಲಾಗಿದೆ ಎಂದರು.

ನದಿಗಳ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಸಾವಿರಾರೂ ಕೋಟಿ ರೂ. ಹಾನಿ ಉಂಟಾಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡ ಪ್ರವಾಹ ಸ್ಥಳಗಳನ್ನು ವೀಕ್ಷಿಸಿದ್ದು, ಯಾವುದೇ ಸಂದರ್ಭದಲ್ಲಿ ಪರಿಹಾರ ಬಿಡುಗಡೆ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಪರಿಹಾರಕ್ಕಾಗಿ ಕಾಯುತ್ತ ಕುಳಿತುಕೊಳ್ಳದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟದಲ್ಲಿ ಚರ್ಚಿಸಿ ರಾಜ್ಯ ಬಜೆಟ್‌ನಿಂದಲೇ ಪರಿಹಾರ ವಿತರಣೆಗೆ ನಿರ್ಧರಿಸಬೇಕು. ಕೇಂದ್ರ ಪರಿಹಾರ ಬಿಡುಗಡೆ ಮಾಡಿದ ವೇಳೆ ರಾಜ್ಯದ ಬಜೆಟ್‌ಗೆ ಪಡೆದುಕೊಳ್ಳಲಾಗುವುದು. ಎನ್‌ಡಿಆರ್‌ಎಫ್ ಪ್ರಕಾರ ಮನೆ ಹಾನಿಗೆ 90 ಸಾವಿರ ರೂ. ಪರಿಹಾರ ನೀಡಬಹುದು. ಆದರೆ, ರಾಜ್ಯ ಸರ್ಕಾರ ಹಾನಿಗೆ ಒಳಗಾಗಿರುವ ಮನೆಗಳಿಗೆ ದುರಸ್ತಿಗಾಗಿ ತಕ್ಷಣ 1ಲಕ್ಷ ರೂ. ಹಾಗೂ ಹೊಸ ಮನೆಗಳ ನಿರ್ಮಾಣಕ್ಕೆ 5 ಲಕ್ಷ ರೂ. ಹಾಗೂ ಸಂತ್ರಸ್ತರು ಬಾಡಿಗೆ ಮನೆಯಲ್ಲಿದ್ದರೆ ಅಂತಹ ಕುಟುಂಬಗಳಿಗೆ ಮಾಸಿಕ 5 ಸಾವಿರ ರೂ. ಬಾಡಿಗೆ ನೀಡುತ್ತಿದೆ ಎಂದರು.

ಶಾಸಕರಾದ ಅಭಯ ಪಾಟೀಲ,ಮಹಾಂತೇಶ ದೊಡ್ಡ ಗೌಡರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ವಿವಿಧ ರೈತ ಸಂಘಟನೆಗ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.

ಬ್ಯಾಂಕ್‌ಗಳ ವಿರುದ್ಧ ಕ್ರಮ

ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿ ದಿನ ಕಳೆಯುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು, ಖಾಸಗಿ ಹಣಕಾಸಿನ ಸಂಸ್ಥೆಗಳು ಸಾಲ ವಸೂಲಿ ಮಾಡಬಾರದು. ಒಂದು ವೇಳೆ ಸಾಲ ವಸೂಲಿಗಾಗಿ ಕಿರುಕುಳ ನೀಡಿದರೆ ಅಂತಹ ಬ್ಯಾಂಕ್ ಶಾಖೆ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈ ಸಂಬಂಧ ರೈತರು ಸಚಿವರಿಗೆ, ಇಲ್ಲ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಎಕರೆ 1.50 ಲಕ್ಷ ರೂ. ಪರಿಹಾರ ನೀಡಿ

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲ ನೀಡಿರುವ ಬ್ಯಾಂಕ್, ಸೊಸೈಟಿಗಳ ಸಾಲ ವಸೂಲಾತಿ ಕಿರುಕುಳ ಜಾಸ್ತಿಯಾಗಿದ್ದು, ತಕ್ಷಣ ನಿಯಂತ್ರಿಸಬೇಕು.ಬೆಳೆಹಾನಿ ಪರಿಹಾರ ಮೊತ್ತವನ್ನು ಹೆಚ್ಚಿಸಿ ಹೆಕ್ಟೇರ್ ಬದಲಾಗಿ ಎಕರೆವಾರು ಪರಿಹಾರ ನೀಡಬೇಕು. ಪ್ರತಿ ಎಕರೆಗೆ 1.50 ಲಕ್ಷ ರೂ., ಮೃತ ಜಾನುವಾರಗಳ ಮಾಲೀಕರಿಗೆ ತಲಾ 80 ಸಾವಿರ ರೂ., ಆಡು ಮೇಕೆಗಳಿಗೆ 25 ಸಾವಿರ ರೂ. ನೀಡಬೇಕು. ಸಂತ್ರಸ್ತರಿಗೆ ಎತ್ತರ ಪ್ರದೇಶಗಳಲ್ಲಿ ಶಾಶ್ವತ ಮನೆ ನಿರ್ಮಿಸಿಕೊಡಬೇಕು. ದಾಖಲೆಗಳು ಇಲ್ಲದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಚೊನ್ನಪ್ಪ ಪೂಜೇರಿ, ರಾಘವೇಂದ್ರ ನಾಯಕ್, ಜಯಶ್ರೀ ಗುರನ್ನವರ ಆಗ್ರಹಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...